ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

Public TV
2 Min Read
jasprit bumrah

ಡಬ್ಲಿನ್: ಏಕದಿನ ಏಷ್ಯಾಕಪ್‌ (AsiaCup 2023) ಹಾಗೂ ವಿಶ್ವಕಪ್‌ (WorldCup 2023) ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಸಿಸಿಐ ಶುಕ್ರವಾರದಿಂದ ಆರಂಭಗೊಳ್ಳಲಿರುವ ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ.

ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ (Jasprit Bumrah) ಬರೋಬ್ಬರಿ 11 ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾಗುತ್ತಿದ್ದು, ಐರ್ಲೆಂಡ್‌ ಸರಣಿಯಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ. ಈ ಸರಣಿಯು ಹಲವು ಯುವ ಆಟಗಾರರಿಗೆ 2024ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಆಯ್ಕೆಗಾರರ ಗಮನ ಸೆಳೆಯಲು ಅವಕಾಶ ನೀಡಲಿದೆ. ವಿಂಡೀಸ್‌ ಸರಣಿಯಲ್ಲಿ ಅನುಭವಿ ಆಟಗಾರರೊಂದಿಗೆ ಹೊಸಬರನ್ನ ಕಣಕ್ಕಿಳಿಸುವ ಪ್ರಯೋಗ ಮಾಡಿದ್ದ ಟೀಂ ಇಂಡಿಯಾ (Team India) ಸರಣಿ ಸೋತು ನಿರಾಸೆ ಅನುಭವಿಸಿತ್ತು. ಇದೀಗ ಐರ್ಲೆಂಡ್‌ ಸರಣಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮಣೆಹಾಕಿರುವುದು ಕುತೂಹಲ. ಇದನ್ನೂ ಓದಿ: ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವುದು ಮುಖ್ಯ, ನನ್ನ ಆಯ್ಕೆಯಲ್ಲ: ಮೌನ ಮುರಿದ ಅಶ್ವಿನ್

Jasprit Bumrah

ಬೂಮ್ರಾ ಜೊತೆ ಮತ್ತೊಬ್ಬ ವೇಗಿ ಪ್ರಸಿದ್ಧ ಕೃಷ್ಣ ಸಹ ಹಲವು ತಿಂಗಳ ಬಳಿಕ ಕ್ರಿಕೆಟ್‌ಗೆ ವಾಪಾಸಾಗಿದ್ದು, ಕಣಕ್ಕಿಳಿಯಲು ಕಾತರಿಸುತ್ತಿದ್ದಾರೆ. ಏಷ್ಯಾಕಪ್ ಹಾಗೂ ವಿಶ್ವಕಪ್ ತಂಡಕ್ಕೆ ಆಯ್ಕೆ ನಿರೀಕ್ಷೆಯಲ್ಲಿರುವ ಈ ಇಬ್ಬರು, ಫಿಟ್‌ನೆಸ್‌ ಸಾಬೀತುಪಡಿಸಲು ಎದುರು ನೋಡುತ್ತಿದ್ದಾರೆ. 2024ರ ಟಿ20 ವಿಶ್ವಕಪ್‌ಗೂ ಯುವ ಆಟಗಾರರ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ 2023ರ ಐಪಿಎಲ್‌ನಲ್ಲಿ ಮಿಂಚಿದ ಜಿತೇಶ್‌ ಶರ್ಮಾ, ರಿಂಕು ಸಿಂಗ್, ಋತುರಾಜ್ ಗಾಯಕ್ವಾಡ್ ಜೊತೆಗೆ ವಿಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿ ಮೂಲಕ ಟೀಂ ಇಂಡಿಯಾಕ್ಕೆ ಆರಂಭಿಕನಾಗಿ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್‌ ಮೇಲೂ ನಿರೀಕ್ಷೆ ಇಡಲಾಗಿದೆ.

ಟಿ20ಗೆ ಭಾರತ ತಂಡ ಹೀಗಿದೆ:
ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

ಪಂದ್ಯ ಎಲ್ಲಿ ಯಾವಾಗ? 
ಮೊದಲ ಟಿ20 – ಆಗಸ್ಟ್‌ 18
2ನೇ ಟಿ20 – ಆಗಸ್ಟ್‌ 20
3ನೇ ಟಿ20 – ಆಗಸ್ಟ್‌ 23

Web Stories

Share This Article