ವೆಲ್ಲಿಂಗ್ಟನ್: ಭಾರತ (India) ಹಾಗೂ ನ್ಯೂಜಿಲೆಂಡ್ (New Zealand) ನಡುವಿನ 3 ಪಂದ್ಯಗಳ ಟಿ20 ಸರಣಿಯ (T20) ಮೊದಲ ಪಂದ್ಯ ಮಳೆಯಿಂದಾಗಿ (Rain) ರದ್ದಾಗಿದೆ.
ವೆಲ್ಲಿಂಗ್ಟನ್‍ನಲ್ಲಿ ನಿಗದಿಯಾಗಿದ್ದ ಮೊದಲ ಟಿ20 ಪಂದ್ಯಕ್ಕೆ ಮಳೆ ಕಾಟ ಕೊಟ್ಟಿತು. ಮಳೆಯಿಂದಾಗಿ ಟಾಸ್ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾದ ಪರಿಣಾಮ ಒಂದೇ ಒಂದು ಎಸೆತ ಕಾಣದೆ ಪಂದ್ಯವನ್ನು ರದ್ದು ಪಡಿಸಲಾಯಿತು. ಇದನ್ನೂ ಓದಿ: ಅತ್ಯಾಚಾರ ಆರೋಪಿ ದನುಷ್ಕಗೆ ಜಾಮೀನು – 1 ಕೋಟಿ ರೂ. ಠೇವಣಿ ಇಟ್ಟು ಸಿಡ್ನಿ ಜೈಲಿನಿಂದ ಬಿಡುಗಡೆ
ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದು, ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಸಹಿತ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಮಿಂಚಲು ರೆಡಿಯಾಗಿದ್ದ ಉಮ್ರಾನ್ ಮಲಿಕ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್‍ಗೆ ಪಂದ್ಯ ರದ್ದುಗೊಂಡಿರುವುದು ನಿರಾಸೆಯಾಗಿದೆ. ಇದನ್ನೂ ಓದಿ: ಇಂಡಿಯಾ, ನ್ಯೂಜಿಲೆಂಡ್ ಕ್ರಿಕೆಟ್ ಸರಣಿ – ಡಿ.ಡಿ ಸ್ಪೋರ್ಟ್ಸ್‌ನಲ್ಲಿ ಮಾತ್ರ ನೇರ ಪ್ರಸಾರ
ಟೀಂ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿ ಆಡಲಿದೆ. ಟಿ20 ಸರಣಿಯ ಎರಡು ಮತ್ತು ಮೂರನೇ ಪಂದ್ಯ ಕ್ರಮವಾಗಿ ನ.20 ಮತ್ತು 22 ರಂದು ನಡೆಯಲಿದೆ. ಆ ಬಳಿಕ 3 ಪಂದ್ಯಗಳ ಏಕದಿನ ಸರಣಿ ನ.25, 27 ಮತ್ತು 30 ರಂದು ನಡೆಯಲಿದ್ದು ಏಕದಿನ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ.