3rd T20I: ಗಿಲ್ ಘರ್ಜನೆಗೆ ಕಿವೀಸ್ ಗಪ್‍ ಚುಪ್ – ಟಿ20 ಸರಣಿ ಗೆದ್ದ ಭಾರತ

Public TV
3 Min Read
TEAM INDIA 1

ಅಹಮದಾಬಾದ್: ಶುಭಮನ್ ಗಿಲ್ (Shubman Gil) ಬ್ಯಾಟಿಂಗ್ ವೈಭವ ಮತ್ತು ಟೀಂ ಇಂಡಿಯಾದ (Team India) ಬೌಲರ್‌ಗಳ ಮಾರಕ ದಾಳಿಗೆ ಕಂಗಾಲಾದ ಪ್ರವಾಸಿ ನ್ಯೂಜಿಲೆಂಡ್ (New Zealand) 3ನೇ ಟಿ20 ಪಂದ್ಯದಲ್ಲಿ ಕೇವಲ 66 ರನ್‍ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 168 ರನ್‍ಗಳ ಭರ್ಜರಿ ಜಯದೊಂದಿಗೆ ಟಿ20 ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ.

Shubman Gill 3

235 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಬ್ಯಾಟ್ಸ್‌ಮ್ಯಾನ್‌ಗಳು ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಕೇವಲ 12.1 ಓವರ್‌ಗಳಲ್ಲಿ 66 ರನ್‍ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ 168 ರನ್‌ಗಳ ದೊಡ್ಡ ಮೊತ್ತದ ಗೆಲುವನ್ನು ದಾಖಲಿಸಿತು. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

TEAM INDIA

ನ್ಯೂಜಿಲೆಂಡ್ ಪರ ಡೇರಿಲ್ ಮಿಚೆಲ್ 35 ರನ್ (25 ಎಸೆತ, 1 ಬೌಂಡರಿ, 3 ಸಿಕ್ಸ್) ಮತ್ತು ಮಿಚೆಲ್ ಸ್ಯಾಂಟರ್ 13 ರನ್ (13 ಎಸೆತ, 1 ಬೌಂಡರಿ) ಸಿಡಿಸಿದನ್ನು ಹೊರತು ಪಡಿಸಿ ಉಳಿದ 5 ಮಂದಿ ಅಟಗಾರರು ಒಂದಂಕಿ ಮೊತ್ತಕ್ಕೆ ಔಟ್ ಆದರೆ ಮೂವರು ಶೂನ್ಯ ಸುತ್ತಿದರು.

India vs New Zealand 1

ಈ ಮೊದಲು ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇಶಾನ್ ಕಿಶನ್ ಕೇವಲ 1 ರನ್‍ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಒಂದಾದ ರಾಹುಲ್ ತ್ರಿಪಾಠಿ ಮತ್ತು ಶುಭಮನ್ ಗಿಲ್ ನ್ಯೂಜಿಲೆಂಡ್ ದಾಳಿಯನ್ನು ದಿಟ್ಟವಾಗಿ ಎದುರಿಸಿದರು. ಇದನ್ನೂ ಓದಿ: Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

Shubman Gill 1

ಈ ಜೋಡಿ ಹೊಡಿಬಡಿ ಆಟದ ಮೂಲಕ ತಂಡದ ರನ್ ಹೆಚ್ಚಿಸಿತು. 2ನೇ ವಿಕೆಟ್‍ಗೆ ಈ ಜೋಡಿ 80 ರನ್ (42 ಎಸೆತ) ಜೊತೆಯಾಟವಾಡಿ ಬೇರ್ಪಟ್ಟಿತು. ತ್ರಿಪಾಠಿ 44 ರನ್ (22 ಎಸೆತ, 4 ಬೌಂಡರಿ, 3 ಸಿಕ್ಸ್) ಸಿಡಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಸೂರ್ಯ ಕುಮಾರ್ ಯಾದವ್ ಬಿರುಸಿನ 24 ರನ್ (13 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು.

India vs New Zealand

ಗಿಲ್ ಘರ್ಜನೆ:
ಇತ್ತ ಶುಭಮನ್ ಗಿಲ್ ಅಬ್ಬರ ಮಾತ್ರ ಕಡಿಮೆಯಾಗಲಿಲ್ಲ. ನ್ಯೂಜಿಲೆಂಡ್ ಬೌಲರ್‌ಗಳ ಬೆವರಿಳಿಸಿದ ಗಿಲ್ ಸ್ಫೋಟಕ ಆಟಕ್ಕೆ ಮುಂದಾದರು. ನಾಯಕ ಪಾಂಡ್ಯ ಜೊತೆಗೂಡಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಗಿಲ್ ಟಿ20 ಕ್ರಿಕೆಟ್‍ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದರು. ಗಿಲ್ ಶತಕದ ಬೆನ್ನಲ್ಲೇ ಪಾಂಡ್ಯ 30 ರನ್ (17 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ಈ ಮೊದಲು ಈ ಜೋಡಿ 4ನೇ ವಿಕೆಟ್‍ಗೆ 103 ರನ್ (40 ಎಸೆತ) ಜೊತೆಯಾಟವಾಡಿತು.

Shubman Gill

ಅಂತಿಮವಾಗಿ ಗಿಲ್ ಅಜೇಯ 126 ರನ್ (63 ಎಸೆತ, 12 ಬೌಂಡರಿ, 7 ಸಿಕ್ಸ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್‍ಗಳ ಬೃಹತ್ ಮೊತ್ತ ಪೇರಿಸಿತು.

ರನ್ ಏರಿದ್ದು ಹೇಗೆ?
50 ರನ್ 33 ಎಸೆತ
100 ರನ್ 58 ಎಸೆತ
150 ರನ್ 87 ಎಸೆತ
200 ರನ್ 104 ಎಸೆತ
234 ರನ್ 120 ಎಸೆತ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *