ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನ್ಯೂಜಿಲೆಂಡ್ 235 ರನ್ ಗಳಿಗೆ ಆಲೌಟ್ ಆಗಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 19 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ.
Advertisement
ರವೀಂದ್ರ ಜಡೇಜ 65ಕ್ಕೆ 5 ವಿಕೆಟ್ ಹಾಗೂ ವಾಷಿಂಗ್ಟನ್ ಸುಂದರ್ 81ಕ್ಕೆ 4 ವಿಕೆಟ್ ಉರುಳಿಸಿ ಉತ್ತಮ ಪ್ರದರ್ಶನ ತೋರಿದರು. ಆದರೆ, ಭಾರತದ ಬ್ಯಾಟಿಂಗ್ ವೈಫಲ್ಯ ಮತ್ತೆ ಮುಂದುವರೆಯಿತು. ಯಶಸ್ವಿ ಜೈಸ್ವಾಲ್ (30), ರೋಹಿತ್ ಶರ್ಮಾ (18) ಮೊಹಮ್ಮದ್ ಸಿರಾಜ್ (0) ಹಾಗೂ ವಿರಾಟ್ ಕೊಹ್ಲಿ (4) ರನ್ ಗಳಿಸಿ ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡಿದರು. ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಕ್ರೀಸಿನಲ್ಲಿದ್ದಾರೆ.
Advertisement
Advertisement
ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ನಲ್ಲಿ 14ನೇ ಸಲ ಐದು ವಿಕೆಟ್ ಪಡೆಯುವ ಮೂಲಕ ಅತ್ಯಂತ ಹೆಚ್ಚಿನ ವಿಕೆಟ್ ಪಡೆದ ಟೀಂ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದರು.
Advertisement
ಬೆಂಗಳೂರು ಪಂದ್ಯದಲ್ಲಿ 8 ವಿಕೆಟ್ ಹಾಗೂ ಪುಣೆ ಪಂದ್ಯದಲ್ಲಿ 113 ರನ್ ಗಳಿಂದ ಸೋತು ಸರಣಿಯಲ್ಲಿ 2-0 ಹಿನ್ನಡೆ ಅನುಭವಿಸಿರುವ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್ ನಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿದೆ.