ಲಕ್ನೋ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಆದರೆ ಟೆಸ್ಟ್ ಸರಣಿ ಆರಂಭಕ್ಕೂ ಮೊದಲು ಭಾರತ ತಂಡಕ್ಕೆ ಕೆಲ ಸವಾಲುಗಳು ಎದುರಾಗಿದೆ.
ಹೌದು ಟೀಂ ಇಂಡಿಯಾ ದುಬೈನಲ್ಲಿ ನಡೆದ ಟಿ20 ವಿಶ್ವಕಪ್‍ನಲ್ಲಿ ಸೆಮಿಫೈನಲ್ ಏರಲು ವಿಫಲವಾಗಿ ತವರಿಗೆ ಮರಳಿತ್ತು. ಬಳಿಕ ಆರಂಭಗೊಂಡ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದೆ. ಇದೀಗ ಚುಟುಕು ಪಂದ್ಯಾಟದಿಂದ ಹೊರ ಬಂದು ಟೆಸ್ಟ್ ಪಂದ್ಯಕ್ಕೆ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಜೊತೆಗೆ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳು ಕೂಡ ನಡೆದಿದೆ. ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದರೆ, ಮೊದಲ ಟೆಸ್ಟ್ ನಲ್ಲಿ ಅಜಿಂಕ್ಯಾ ರಹಾನೆ ನಾಯಕರಾಗಿ ಟೀಂ ಇಂಡಿಯಾದಲ್ಲಿದ್ದಾರೆ. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆ.ಎಲ್ ರಾಹುಲ್ ಹೊರಕ್ಕೆ
ಈ ಎಲ್ಲದರ ನಡುವೆ ಟೆಸ್ಟ್ ಸರಣಿ ಆರಂಭಕ್ಕೂ ಮೊದಲು ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಗಾಯಲುವಾಗಿ ಸರಣಿಯಿಂದ ಹೊರ ನಡೆದಿದ್ದಾರೆ. ಹಾಗಾಗಿ ಇದೀಗ ಆರಂಭಿಕ ಆಟಗಾರರ ಆಯ್ಕೆಯಲ್ಲಿ ಬಾರಿ ಗೊಂದಲಗಳಿವೆ. ರಾಹುಲ್ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆಗೊಂಡರು ಕೂಡ ಅವರು ಟೆಸ್ಟ್ ಸ್ಪೆಷಲಿಸ್ಟ್ ಅಲ್ಲ. ಇದೀಗ ತಂಡದಲ್ಲಿರುವ ಮಯಾಂಕ್ ಅಗರ್ವಾಲ್ ಜೊತೆ ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಬಹುದು ಇವರನ್ನು ಹೊರತು ಪಡಿಸಿ ಆರಂಭಿಕ ಆಟಗಾರಾಗಿ ಈ ಹಿಂದಿನ ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾದಲ್ಲಿದ್ದ ಪೃಥ್ವಿ ಶಾ, ರೋಹಿತ್ ಶರ್ಮಾ, ಶಿಖರ್ ಧವನ್ ಇವರು ಯಾರು ಕೂಡ ತಂಡದಲ್ಲಿಲ್ಲ. ಹೆಚ್ಚುವರಿ ಓಪನರ್ ಆಗಿ ಶ್ರೀಕರ್ ಭರತ್ ತಂಡದಲ್ಲಿ ಇದ್ದಾರೆ ಅವರಿಗೆ ಟೀಂ ಇಂಡಿಯಾದಲ್ಲಿ ಆಡಿದ ಅನುಭವದ ಕೊರತೆ ಇದೆ. ಇದನ್ನೂ ಓದಿ: ಕಪ್ ಗೆಲ್ಲಲು ಲಕ್ಕಿ ಕಲರ್ ಆದ ಹಳದಿ ಜೆರ್ಸಿ
ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ಶುಭಮನ್ ಗಿಲ್ ಆರಂಭಿಕರಾಗಿ ಆಡಬಹುದು, ಜೊತೆಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ ಹಾಗಾಗಿ ಇನ್ನಷ್ಟೇ ಪದಾರ್ಪಣೆ ಮಾಡಬೇಕಾಗಿರುವ ಶ್ರೇಯಸ್ ಅಯ್ಯರ್‌ಗೆ ಮಧ್ಯಮ ಕ್ರಮಾಂಕದ ಜವಾಬ್ದಾರಿ ಹೊರಿಸುವ ಸಾಧ್ಯತೆ ಇದೆ. ಇದನ್ನೂ ಓದಿ: 20 ಕೋಟಿಗೆ ರಾಹುಲ್ ಹರಾಜು: ಆಕಾಶ್ ಚೋಪ್ರಾ ಭವಿಷ್ಯ
ಬ್ಯಾಟಿಂಗ್‍ನಲ್ಲಿ ಈ ಎಲ್ಲಾ ಸಮಸ್ಯೆಗಳಿದ್ದರೆ ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್‌ಗಳಾಗಿ ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್ ತಂಡದಲ್ಲಿದ್ದಾರೆ ಇವರೆಲ್ಲರೂ ಕೂಡ ಉತ್ತಮ ಫಾರ್ಮ್‍ನಲ್ಲಿದ್ದಾರೆ ಹಾಗಾಗಿ ಯಾರನ್ನು ಪ್ಲೇಯಿಂಗ್ 11ನಲ್ಲಿ ಹಾಕಿಕೊಳ್ಳುವುದು ಯಾರನ್ನು ಬಿಡುವುದೆಂಬ ಸವಾಲು ಕೂಡ ನಾಯಕ ಹಾಗೂ ಕೋಚ್ ಮುಂದಿದೆ. ಹಾಗಾಗಿ ಈ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ಟೀಂ ಇಂಡಿಯಾ ಬಲಿಷ್ಠ ತಂಡ ಕಣಕ್ಕಿಳಿದು ಟೆಸ್ಟ್ ಪಂದ್ಯ ಗೆಲ್ಲಬೇಕಿದೆ.