– ಸೂಪರ್ ಸಂಡೇ ಮತ್ತೊಮ್ಮೆ ರಣರೋಚಕ ಕದನ
ದುಬೈ: ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಇದೇ ಮೊದಲಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
1984ರಲ್ಲಿ ಏಷ್ಯಾ ಕಪ್ ಪ್ರಾರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು ನಡೆಯಲಿರುವ ಪಂದ್ಯ ಅಕ್ಷರಶಃ ಹೈವೋಲ್ಟೇಜ್ ಪಂದ್ಯವಾಗಲಿದೆ. ಇದನ್ನೂ ಓದಿ: ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ಐಸಿಸಿ ವಾರ್ನಿಂಗ್
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಪಾಕಿಸ್ತಾನದ ಬ್ಯಾಟರ್ ಗಳು ಕೈಕೊಟ್ಟರೂ ಬೌಲರ್ ಗಳ ಸಾಹಸದಿಂದಾಗಿ ಪಂದ್ಯ ರೋಮಾಂಚಕ ಅಂತ್ಯ ಕಾಣುವಂತಾಯಿತು.
ಬಾಂಗ್ಲಾದೇಶ ತಂಡದ ಬ್ಯಾಟರ್ ಗಳನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಹಿನ್ ಶಾ ಅಫ್ರಿದಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇದನ್ನೂ ಓದಿ: ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ – ಫರ್ಹಾನ್, ರೌಫ್ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು
ಸಂಕ್ಷಿಪ್ತ ಸ್ಕೋರ್
ಪಾಕಿಸ್ತಾನ 20 ಓವರ್ ಗಳಲ್ಲಿ 135/8
ಮೊಹಮ್ಮದ್ ಹ್ಯಾರಿಸ್ 31 (23), ಮೊಹಮ್ಮದ್ ನವಾಝ್ 25(15), ಶಾಹಿನ್ ಶಾ ಅಫ್ರಿದಿ 19(13), ಟಸ್ಕಿನ್ ಅಹ್ಮದ್ 28ಕ್ಕೆ 3, ಮಹೆದಿ ಹಸನ್ 28ಕ್ಕೆ 2, ರಿಶಾದ್ ಹುಸೈನ್ 18ಕ್ಕೆ 2
ಬಾಂಗ್ಲಾದೇಶ 20 ಓವರ್ ಗಳಲ್ಲಿ 124/9,
ಶಮಿಮ್ ಹುಸೇನ್ 30(25), ರಿಶಾದ್ ಹುಸೇನ್ 16(11), ಶಹೀನ್ ಶಾ ಅಫ್ರಿದಿ 17ಕ್ಕೆ 3, ಹ್ಯಾರಿಸ ರೌಫ್ 33ಕ್ಕೆ 3.



