ಬೆಂಗಳೂರು: ದಕ್ಷಿಣ ಆಫ್ರಿಕಾ ತಂಡದ ಬೌಲರ್‌ಗಳ ದಾಳಿಗೆ ಆರಂಭದಲ್ಲಿಯೇ ಮುಗ್ಗರಿಸಿದ ಕೊಹ್ಲಿ ಪಡೆ 135 ರನ್‍ಗಳ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್‍ಗಳ ನಷ್ಟಕ್ಕೆ 134 ರನ್ ದಾಖಲಿಸಿದೆ.
Advertisement
ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ್ದರು. ಆದರೆ ಇನ್ನಿಂಗ್ಸ್ ನ ಮೂರನೇ ಓವಲರ್‌ನ ಎರಡನೇ ಎಸೆತದಲ್ಲಿ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಬಳಿಕ ಭರ್ಜರಿ ಬ್ಯಾಟಿಂಗ್ ಮುಂದುವರಿಸಿದ ಶಿಖರ್ ಧವನ್‍ಗೆ ಕೊಹ್ಲಿ ಸಾಥ್ ನೀಡಿದರು.
Advertisement
Advertisement
ಇನ್ನಿಂಗ್ಸ್ ನ ಏಳನೇ ಓವರ್ ನಲ್ಲಿ ಶಿಖರ್ ಧವನ್ ವಿಕೆಟ್ ಒಪ್ಪಿಸಿದರು. 25 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ ಎರಡು ಸಿಕ್ಸರ್, 4 ಬೌಂಡರಿ ಸೇರಿ 36 ರನ್ ಕಲೆಹಾಕಿದರು. ಧವನ್ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. 15 ಎಸೆತಗಳನ್ನು ಎದುರಿಸಿದ ವಿರಾಟ್ 9 ರನ್ ದಾಖಲಿಸಲು ಶಕ್ತರಾದರು.
Advertisement
ಇನ್ನಿಂಗ್ಸ್ ನ 9 ಓವರ್‌ಗಳ ವೇಳೆಗೆ ಟೀಂ ಇಂಡಿಯಾ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. ಆಗ ಯುವ ಆಟಗಾರರಾದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ವಿಕಟ್ ಕಾಯ್ದುಕೊಂಡು ರನ್ ಕದಿಯಲು ಆರಂಭಿಸಿದರು. ಆದರೆ ಇನ್ನಿಂಗ್ಸ್ ನ 13ನೇ ಓವರ್‌ನ 4ನೇ ಎಸೆತದಲ್ಲಿ ರಿಷಭ್ ಪಂತ್ ಹಾಗೂ 5ನೇ ಎಸೆತದಲ್ಲಿ ಶ್ರೇಯಸ್ ಅಯ್ಯರ್ ವಿಕೆಟ್ ಒಪ್ಪಿಸಿದರು. 20 ಎಸೆತಗಳನ್ನು ಎದುರಿಸಿದ ಪಂತ್ ಸಿಕ್ಸ್, ಒಂದು ಬೌಂಡರಿ ಸೇರಿ 19 ರನ್ ದಾಖಲಿಸಿದರೆ, ಶ್ರೇಯಸ್ ಅಯ್ಯರ್ 5 ರನ್ ಕದಿಯಲು ಶಕ್ತರಾದರು.
ರವೀಂದ್ರ ಜಡೇಜಾ 19 ರನ್, ಹಾರ್ದಿಕ್ ಪಾಂಡ್ಯ 14 ರನ್ ದಾಖಲಿಸಿ ತಂಡಕ್ಕೆ ಆಸರೆಯಾದರು. ಈ ಮೂಲಕ ಟೀಂ ಇಂಡಿಯಾ ಇನ್ನಿಂಗ್ಸ್ ನ ನಿಗದಿತ 20 ಓವರ್‍ಗಳಲ್ಲಿ 134 ರನ್ ದಾಖಲಿಸಿದೆ.