ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಯತ್ನಿಸುತ್ತಿರುವ ಯುವ ಆಟಗಾರ ರಿಷಬ್ ಪಂತ್‍ಗೆ ಗೌತಮ್ ಗಂಭೀರ್ ‘ಸೀರಿಯಸ್’ ವಾರ್ನಿಂಗ್ ನೀಡಿದ್ದಾರೆ.
ಟೀಂ ಇಂಡಿಯಾದಲ್ಲಿ ಸತತ ಅವಕಾಶಗಳನ್ನು ಪಡೆಯುತ್ತಿರುವ ರಿಷಬ್ ಪಂತ್ ಒಮ್ಮೆ ತನ್ನ ಪ್ರದರ್ಶನದ ಕುರಿತು ಪರಿಶೀಲನೆ ನಡೆಸಿಕೊಂಡರೆ ಒಳ್ಳೆಯದು ಎಂದು ಗೌತಮ್ ಗಂಭೀರ್ ಹೇಳಿದ್ದು, ಪಂತ್‍ಗೆ ಉತ್ತಮ ಸಾಮರ್ಥ್ಯವಿದ್ದು, ಈ ಕುರಿತು ಯಾವುದೇ ಸಂದೇಹವಿಲ್ಲ. ಆದರೆ ತಂಡದಲ್ಲಿ ಸ್ಥಾನ ಪಡೆಯಲು ಮತ್ತೊಬ್ಬ ಯುವ ಆಟಗಾರ ಸಂಜು ಸ್ಯಾಮ್ಸನ್ ಸವಾಲು ನೀಡುತ್ತಿದ್ದಾರೆ. ನನ್ನ ನೆಚ್ಚಿನ ಆಟಗಾರ ಸ್ಯಾಮ್ಸನ್ ಖಂಡಿತ ರಿಷಬ್‍ಗೆ ಸವಾಲಾಗಲಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.
Advertisement
Advertisement
ಧೋನಿ ಸ್ಥಾನವನ್ನು ತುಂಬುವಂತಹ ಆಟಗಾರರ ಆಯ್ಕೆಯಲ್ಲಿ ಪಂತ್ ಅವರಿಗೆ ಆಯ್ಕೆ ಸಮಿತಿ ಮೊದಲ ಅವಕಾಶ ನೀಡಿದೆ, ಆದರೆ ಪಂತ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಇತ್ತ ಸ್ಯಾಮ್ಸನ್ ಐಪಿಎಲ್ ಹಾಗೂ ಟೀಂ ಇಂಡಿಯಾ ಎ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯವ ನಿರೀಕ್ಷೆಯಲ್ಲಿದ್ದಾರೆ.
Advertisement
ಇದೇ ವೇಳೆ ಟೀಂ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್ ಕುರಿತು ಗಂಭೀರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿ ಈ ಆಟಗಾರರಿಗೆ ಉತ್ತಮ ಪ್ರದರರ್ಶನ ನೀಡುವ ಅವಕಾಶವಿದೆ. ಸರಣಿಯಲ್ಲಿ ಟೀಂ ಇಂಡಿಯಾ ಫೇವರೆಟಾಗಿದ್ದು, ದಕ್ಷಿಣ ಆಫ್ರಿಕಾ ತಂಡ ಅನುಭವಿ ಆಟಗಾರರ ಕೊರತೆ ಎದುರಿಸುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.