ಸೆಂಚುರಿಯನ್: ಬಾಂಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಅವರ ತವರು ನೆಲದಲ್ಲೇ ಟೀಂ ಇಂಡಿಯಾ ಬಗ್ಗು ಬಡಿದಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ ನೂತನ ಮೈಲಿಗಲ್ಲು ನೆಟ್ಟಿದ್ದರು ಇದನ್ನು ಭಾರತೀಯ ಆಟಗಾರರು ಸಂಭ್ರಮಿಸಿದ್ದಾರೆ.
Advertisement
ಮೊಹಮ್ಮದ್ ಶಮಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ 200 ವಿಕೆಟ್ ಕಿತ್ತ ಸಾಧನೆ ಮಾಡಿದರೆ, ಪಂತ್ ವಿಕೆಟ್ ಕೀಪಿಂಗ್‍ನಲ್ಲಿ ವೇಗವಾಗಿ 100 ಬಲಿ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದರು. ಈ ಇಬ್ಬರೂ ಆಟಗಾರರು ಡ್ರೆಸ್ಸಿಂಗ್ ರೂಂನಲ್ಲಿ ಸಹ ಆಟಗಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಈ ನೂತನ ಮೈಲಿಗಲ್ಲನ್ನು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ನಾಗಾಲೋಟ ಮುಂದುವರಿಸಿದ ಬುಲ್ಸ್ – ಹರ್ಯಾಣ ವಿರುದ್ಧ 14 ಅಂಕಗಳ ಭರ್ಜರಿ ಜಯ
Advertisement
Advertisement
ಶಮಿ ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಗೊಂಚಲು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ 200 ವಿಕೆಟ್ ಪಡೆದ ಟೀಂ ಇಂಡಿಯಾದ 11 ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಅಲ್ಲದೇ ಕಪಿಲ್ ದೇವ್ ಮತ್ತು ಶ್ರೀನಾಥ್ ಬಳಿಕ ವೇಗವಾಗಿ 200 ವಿಕೆಟ್ ಸಾಧನೆ ಮಾಡಿದ ಆಟಗಾರ ಎಂಬ ಮೈಲಿಗಲ್ಲು ನೆಟ್ಟರು. ಇದನ್ನೂ ಓದಿ: ಬಾಕ್ಸಿಂಗ್ ಡೇ ಟೆಸ್ಟ್ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
Advertisement
ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ಪಂತ್ 26 ಟೆಸ್ಟ್ ಪಂದ್ಯಗಳಿಂದ 100 ವಿಕೆಟ್ ಬಲಿ ಪಡೆದು ಟೀಂ ಇಂಡಿಯಾ ಪರ ವೇಗವಾಗಿ 100 ವಿಕೆಟ್ ಬಲಿ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ಹಿಂದೆ ಧೋನಿ ಮತ್ತು ವೃದ್ಧಿಮಾನ್ ಸಾಹಾ 36 ಪಂದ್ಯಗಳಿಂದ 100 ವಿಕೆಟ್ ಬಲಿ ಪಡೆದಿದ್ದರು.