ಇಂದೋರ್: ಯುವ ವೇಗಿಗಳ ಉತ್ತಮ ಬೌಲಿಂಗ್ ದಾಳಿ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‍ನಿಂದ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ 15 ಎಸೆತಗಳು ಬಾಕಿ ಇರುವಂತೆ ಗೆದ್ದು ಬೀಗಿದೆ.
ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಶ್ರೀಲಂಕಾ ತಂಡವನ್ನು 143 ರನ್‍ಗಳಿಗೆ ಕಟ್ಟಿ ಹಾಕಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಕೊಹ್ಲಿ ಪಡೆ ಇನ್ನಿಂಗ್ಸ್ ನ 17ನೇ ಓವರ್‌ನ 3 ಎಸೆತದಲ್ಲಿ ಕೊಹ್ಲಿ ಸಿಕ್ಸ್ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ 45 ರನ್ (32 ಎಸೆತ, 6 ಬೌಂಡರಿ), ಶಿಖರ್ ಧವನ್ 32 ರನ್ (29 ಎಸೆತ, 2 ಬೌಂಡರಿ), ಶ್ರೇಯಸ್ ಅಯ್ಯರ್ 34 ರನ್ ( 26 ಎಸೆತ, 3 ಬೌಂಡರಿ, ಸಿಕ್ಸ್), ವಿರಾಟ್ ಕೊಹ್ಲಿ ಔಟಾಗದೆ 30 ರನ್ ( 17 ಎಸೆತ, ಬೌಂಡರಿ, 2 ಸಿಕ್ಸರ್) ಗಳಿಂದ 3 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಗೆಲುವು ದಾಖಲಿಸಿತು.
Advertisement
ICYMI – Watch @klrahul11 's opening act of 45(32).
Full video here – https://t.co/7sblx6l4kr #INDvSL pic.twitter.com/5hMZC6Ua3l
— BCCI (@BCCI) January 7, 2020
Advertisement
ರಾಹುಲ್ ಭರ್ಜರಿ ಬ್ಯಾಟಿಂಗ್:
ಆರಂಭಿಕ ಆಟಗಾರರಾದ ಕೆ.ಎಲ್.ರಾಹುಲ್ ಹಾಗೂ ಶಿಖರ್ ಧವನ್ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಇನ್ನಿಂಗ್ಸ್ ನ 3ನೇ ಓವರ್‌ನಲ್ಲಿ ಶ್ರೀಲಂಕಾ ನಾಯಕ ಲಸಿತ್ ಮಾಲಿಂಗ ಅವರ 2 ಎಸೆತಗಳನ್ನು ಕೆ.ಎಲ್.ರಾಹುಲ್ ಬೌಂಡರಿಗೆ ಅಟ್ಟಿದರು. ಈ ಓವರ್ ನಲ್ಲಿ 11 ರನ್ ಸಿಡಿಸಿದ ರಾಹುಲ್ ಸ್ಫೋಟಕ ಬ್ಯಾಂಟಿಂಗ್ ಆರಂಭಿಸಿದರು. ಆದರೆ ಇನ್ನಿಂಗ್ಸ್ ನ 10ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.
Advertisement
ಈ ಪಂದ್ಯದಲ್ಲಿ 45 ರನ್ ಗಳಿಸುವ ಮೂಲಕ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ಸಾಧನೆಯನ್ನು ಸರಿಗಟ್ಟಿದ್ದಾರೆ. ಟೀಂ ಇಂಡಿಯಾ ಪರ ಯುವರಾಜ್ ಸಿಂಗ್ 51 ಇನ್ನಿಂಗ್ಸ್ ಗಳಲ್ಲಿ 1,177 ರನ್ ಗಳಿಸಿದರೆ, ಕೆ.ಎಲ್.ರಾಹುಲ್ 32 ಇನ್ನಿಂಗ್ಸ್ ಗಳಲ್ಲಿ 1,183 ರನ್ ಪೇರಿಸಿದ್ದಾರೆ.
Advertisement
ಕೊಹ್ಲಿ ನಂಬರ್ 1:
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಲಭ್ಯವಿಲ್ಲ. ಆಯ್ಕೆ ಸಮಿತಿಯು ಅವರಿಗೆ ಸರಣಿಯಲ್ಲಿ ವಿಶ್ರಾಂತಿ ನೀಡಿದೆ. ಹೀಗಾಗಿ ರನ್ ಮೆಷಿನ್ ವಿರಾಟ್ ಕೊಹ್ಲಿ ಭಾರತದ ಪರ ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ರನ್‍ಗಳಿಸಿದ ದಾಖಲೆಯನ್ನು ಬರೆದಿದ್ದಾರೆ.
ಈ ಪಂದ್ಯದಲ್ಲಿ 30 ರನ್ ಗಳಿಸಿ ವಿರಾಟ್ ಕೊಹ್ಲಿ ಭಾರತದ ಪರ ಅಂತರಾಷ್ಟ್ರೀಯ ಟಿ20 ಅತಿ ಹೆಚ್ಚು ರನ್‍ಗಳಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ 96 ಇನ್ನಿಂಗ್ಸ್ ಗಳಲ್ಲಿ 2,633 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 71 ಇನ್ನಿಂಗ್ಸ್ ಗಳಲ್ಲಿ 2,663 ರನ್ ದಾಖಲಿಸಿದ್ದಾರೆ.
That's that from Indore.#TeamIndia win by 7 wickets. Lead the three-match series 1-0.#INDvSL pic.twitter.com/5mtCxcHFHr
— BCCI (@BCCI) January 7, 2020
ಕೆ.ಎಲ್.ರಾಹುಲ್ ವಿಕೆಟ್ ಒಪ್ಪಿಸಿದ ಬಳಿಕ ಮೈದಾನಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಅವರು 34 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ರಿಷಭ್ ಪಂತ್ ಔಟಾಗದೆ 1 ರನ್ ಹಾಗೂ ವಿರಾಟ್ ಕೊಹ್ಲಿ ಔಟಾಗದೆ 30 ರನ್ ಸಿಡಿಸಿ 15 ಎಸೆತಗಳು ಬಾಕಿ ಇರುವಂತೆ ದಂಡವನ್ನು ಗೆಲುವಿನ ಗುರಿ ದಾಟಿಸಿದರು.
A clinical performance by #TeamIndia in Indore.
Will the boys clinch the series in Pune? #INDvSL pic.twitter.com/6Hm0jPVYC1
— BCCI (@BCCI) January 7, 2020