Saturday, 21st July 2018

Recent News

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು.

ಇಲ್ಲಿನ ಕ್ಯಾಂಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ಕೆ.ಎಲ್.ರಾಹುಲ್ ತಂಡಕ್ಕೆ ಉತ್ತಮ ಜೊತೆಯಾಟ ನೀಡಿ ಮೊದಲ ವಿಕೆಟ್‍ಗೆ 188 ರನ್ ಪೇರಿಸಿದರು. ಆದರೆ 40ನೇ ಓವರ್ ನಲ್ಲಿ ಪುಷ್ಪಕುಮಾರ್ ಎಸೆತದಲ್ಲಿ ಕೆ.ಎಲ್.ರಾಹುಲ್ 85 ರನ್ ಗೆ ಔಟಾದರು. 135 ಎಸೆತ ಎದುರಿಸಿದ್ದ ರಾಹುಲ್ 8 ಬೌಂಡರಿಗಳ ನೆರವಿನಿಂದ 85 ರನ್ ಗಳಿಸಿದರು. ಸದ್ಯ ಶಿಖರ್ ಧವನ್ ಹಾಗೂ ಚೇತೇಶ್ವರ್ ಪೂಜಾರ ಆಟವಾಡುತ್ತಿದ್ದಾರೆ.

ಸದ್ಯ ಭಾರತ 43ನೇ ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಆಟ ಮುಂದುವರಿಸಿದೆ.

Leave a Reply

Your email address will not be published. Required fields are marked *