ಚಂಡೀಗಢ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತನ್ನ 100ನೇ ಟೆಸ್ಟ್ ಪಂದ್ಯವನ್ನು ಮೊಹಾಲಿಯಲ್ಲಿ ಆಡುತ್ತಿದ್ದಾರೆ. ಆದರೆ ಈ ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ನಿರಾಕರಿಸಲಾಗಿದೆ.
Advertisement
ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಮಾರ್ಚ್ 4 ರಿಂದ ಆರಂಭವಾಗಲಿದೆ. ಪಂಜಾಬ್‍ನ ಮೊಹಾಲಿಯಲ್ಲಿ ನಡೆಯುವ ಈ ಪಂದ್ಯ ವಿರಾಟ್ ಕೊಹ್ಲಿಗೆ ಐತಿಹಾಸಿಕ ಪಂದ್ಯವಾಗಿದ್ದು, ತಮ್ಮ ವೃತ್ತಿಜೀವನದ 100 ಟೆಸ್ಟ್ ಪಂದ್ಯವಾಗಿರಲಿದೆ. ಆದರೆ ಈ ಪಂದ್ಯದ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಇಲ್ಲ. ಇದರಿಂದ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆಯಾಗಿದೆ. ಇದನ್ನೂ ಓದಿ: ಟಿ20 ಸರಣಿಯಿಂದ ಗಾಯಕ್ವಡ್ ಔಟ್ – ಕನ್ನಡಿಗನಿಗೆ ಒಲಿದ ಅದೃಷ್ಟ
Advertisement
Advertisement
ಈ ಬಗ್ಗೆ ಪಂಜಾಬ್ ಕ್ರಿಕೆಟ್ ಅಕಾಡೆಮಿಯ ಸಿಇಒ ದೀಪಕ್ ಶರ್ಮಾ ಮಾಹಿತಿ ಹಂಚಿಕೊಂಡಿದ್ದು, ಬಯೋ ಬಬಲ್‍ನಲ್ಲಿ ಪಂದ್ಯ ನಡೆಯುವುದರಿಂದಾಗಿ ಮೊಹಾಲಿಯಲ್ಲಿ ನಡೆಯುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಾರ್ಚ್ 26ಕ್ಕೆ ಐಪಿಎಲ್ ಆರಂಭ ಮೇ 29ಕ್ಕೆ ಫೈನಲ್ – 2 ನಗರಗಳಲ್ಲಿ 70 ಪಂದ್ಯ
Advertisement
ಭಾರತ ಶ್ರೀಲಂಕಾ ವಿರುದ್ಧ 2 ಟೆಸ್ಟ್ ಪಂದ್ಯಗಳ ಸರಣಿ ಆಡಲಿದ್ದು, ಮೊದಲ ಪಂದ್ಯ ಮೊಹಾಲಿ ಮತ್ತು ಎರಡನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.