ಚೆನ್ನೈ: ವೆಸ್ಟ್ ಇಂಡೀಸ್ ಶಿಮ್ರಾನ್ ಹೆಟ್ಮೆಯರ್ ಹಾಗೂ ಶಾಯ್ ಹೋಪ್ ಅಬ್ಬರದ ದ್ವಿಶತಕದ ಜೊತೆಯಾಟದಿಂದ ಭಾರತದ ವಿರುದ್ಧ 8 ವಿಕೆಟ್‍ನಿಂದ ಭರ್ಜರಿ ಗೆಲುವು ಸಾಧಿಸಿದೆ.
ಚೆನ್ನೈನ ಚಿಪಾಕ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ನಡೆದ ಏಕದಿನ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ನೀಡಿದ್ದ 288 ರನ್‍ಗಳ ಗುರಿಯನ್ನು ವೆಸ್ಟ್ ಇಂಡೀಸ್ 13 ಎಸೆತಗಳು ಬಾಕಿ ಇರುವಂತೆ ಗೆದ್ದು ಬೀಗಿದೆ. ವೆಸ್ಟ್ ಇಂಡೀಸ್ ಹೆಟ್ಮೆಯರ್ 139 ರನ್, ಶಾಯ್ ಹೋಪ್ 102 ರನ್, ನಿಕೋಲಸ್ ಪೂರನ್ 29 ರನ್‍ಗಳಿಂದ 47.5 ಓವರ್ ನಲ್ಲಿ 291 ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ.
Advertisement
Advertisement
ಭಾರತದ ನೀಡಿದ್ದ 288 ರನ್‍ಗಳ ಗುರಿಯನ್ನು ಬೆನ್ನುಹತ್ತಿದ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ನ ಮೊದಲ ಓವರ್ ನಲ್ಲಿ ಯಾವುದೇ ರನ್ ಗಳಿಸಲಿಲ್ಲ. ಅಷ್ಟೇ ಅಲ್ಲದೆ ಮೂರನೇ ಓವರ್ ನಲ್ಲಿ ಮೊದಲ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ಹೀಗಾಗಿ ಇನ್ನಿಂಗ್ಸ್ ನ 10ನೇ ಓವರ್ ಮುಕ್ತಾಯಕ್ಕೆ ವಿಂಡೀಸ್ ತಂಡ ಒಂದು ವಿಕೆಟ್ ನಷ್ಟಕ್ಕೆ 36 ಗಳಿಸಲು ಶಕ್ತವಾಗಿತ್ತು. ಆದರೆ ಶಿಮ್ರಾನ್ ಹೆಟ್ಮೆಯರ್ ಹಾಗೂ ಶಾಯ್ ಹೋಪ್ ಜೋಡಿಯು ವಿಕೆಟ್ ಕಾಯ್ದುಕೊಂಡು ನಿಧಾನಗತಿ ಬ್ಯಾಟಿಂಗ್ ಮುಂದುವರಿಸಿತು.
Advertisement
ಇನ್ನಿಂಗ್ಸ್ ನ 20ನೇ ಓವರ್ ಬಳಿಕ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ಹೆಟ್ಮೆಯರ್ ತಮ್ಮ ವೃತ್ತಿಜೀವನದ ಐದನೇ ಶತಕವನ್ನು ಬಾರಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ಪರ ವೇಗವಾಗಿ 5 ಶತಕಗಳ ಗಳಿಸಿದ್ದ ಶಾಯ್ ಹೋಪ್ ದಾಖಲೆಯನ್ನು ಹೆಟ್ಮೆಯರ್ ಮುರಿದರು. ಹೆಟ್ಮೆಯರ್ 38 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಹೋಪ್ 46 ಇನ್ನಿಂಗ್ಸ್ ಗಳಲ್ಲಿ ಐದು ಶತಕಗಳನ್ನು ಗಳಿಸಿದ್ದರು.
Advertisement
ODI ???? No. 5️⃣ for Shimron Hetmyer in only 85 balls! ???? ????
Shai Hope has also brought up his fifty ????
Will these two guide the Windies to the win?#INDvWI | FOLLOW ???? https://t.co/9QkJ4D8HOy pic.twitter.com/tKIUg484Bv
— ICC (@ICC) December 15, 2019
ಶಿಮ್ರಾನ್ ಹೆಟ್ಮೆಯರ್ ಹಾಗೂ ಶಾಯ್ ಹೋಪ್ ಜೋಡಿಯು ಎರಡನೇ ವಿಕೆಟ್ ನಷ್ಟಕ್ಕೆ 218 ರನ್‍ಗಳ ಬೃಹತ್ ಮೊತ್ತದ ಜೊತೆಯಾಟ ಕಟ್ಟಿಕೊಟ್ಟಿತು. ಇನ್ನಿಂಗ್ಸ್ ನ 39ನೇ ಓವರ್ ನಲ್ಲಿ ಹೆಟ್ಮೆಯರ್ ಮೊಹಮ್ಮದ್ ಶಮಿ ಬೌಲಿಂಗ್ ವೇಳೆ ಶ್ರೇಯಸ್ ಅಯ್ಯರ್ ಗೆ ಕ್ಯಾಚ್ ನೀಡಿದರು. 106 ಎಸೆತಗಳಲ್ಲಿ ಹೆಟ್ಮೆಯರ್ (11 ಬೌಂಡರಿ, 7 ಸಿಕ್ಸರ್) 139 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ತಂದು ವಿಕೆಟ್ ಒಪ್ಪಿಸಿದರು.
ಶಮಿ ದಾಖಲೆ:
2019ರಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ನ್ಯೂಜಿಲ್ಯಾಂಡ್‍ನ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಒಂದು ವಿಕೆಟ್ ಪಡೆಯುವ ಮೂಲಕ ಟ್ರೆಂಟ್ ಬೌಲ್ಟ್ ಅವರನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ವೇಗಿಗಳು ತಲಾ 38 ವಿಕೆಟ್ ಪಡೆದಿದ್ದಾರೆ. ಆದರೆ ಮೊಹಮ್ಮದ್ ಶಮಿ 13 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದರೆ, ಟ್ರೆಂಟ್ ಬೌಲ್ಟ್ 20 ಇನ್ನಿಂಗ್ಸ್ ಗಳಲ್ಲಿ 28 ವಿಕೆಟ್ ಕಿತ್ತಿದ್ದಾರೆ.
Mohammad Shami strikes and Hetmyer is gone for 139!
Can India claw their way back in to this game?#INDvWI | FOLLOW ???? https://t.co/9QkJ4D8HOy pic.twitter.com/hYho1Qu9xy
— ICC (@ICC) December 15, 2019
ಹೆಟ್ಮೆಯರ್ ವಿಕೆಟ್ ಬಳಿಕ ಮೈದಾನಕ್ಕಿಳಿದ ನಿಕೋಲಸ್ ಪೂರನ್ ಆರಂಭಿಕ ಬ್ಯಾಟ್ಸ್‌ಮನ್ ಶಾಯ್ ಹೋಪ್‍ಗೆ ಸಾಥ್ ನೀಡಿದರು. 151 ಎಸೆತಗಳಲ್ಲಿ ಶಾಯ್ ಹೋಪ್ (7 ಬೌಂಡರಿ, ಸಿಕ್ಸ್) 102 ರನ್ ಹಾಗೂ 23 ಎಸೆತಗಳಲ್ಲಿ ನಿಕೋಲಸ್ ಪೂರನ್ 4 ಬೌಂಡರಿ ಸೇರಿ 29ರನ್ ಸಹಾಯದಿಂದ ವೆಸ್ಟ್ ಇಂಡೀಸ್ 47.5 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 291 ರನ್ ಸಿಡಿಸಿ ಗೆಲುವು ಸಾಧಿಸಿತು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಶ್ರೇಯಸ್ ಅಯ್ಯರ್ 70 ರನ್, ರಿಷಭ್ ಪಂತ್ 71, ಕೇದಾರ್ ಜಾಧವ್ 40 ರನ್‍ಗಳ ಸಹಾಯದಿಂದ 8 ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿತ್ತು.
ಪಂತ್-ಅಯ್ಯರ್ ಆಸರೆ:
ವಿಕೆಟ್ ಕಾಯ್ದುಕೊಂಡು ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ ಇನ್ನಿಂಗ್ಸ್ ನ 32ನೇ ಓವರ್ ನಲ್ಲಿ ಅರ್ಧಶತಕ (70 ಎಸೆತ) ಪೂರೈಸಿದರು. ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರ 5ನೇ ಅರ್ಧಶತಕ ಇದಾಗಿದೆ. ಈ ಬೆನ್ನಲ್ಲೇ ಸ್ಫೋಟಕ ಬ್ಯಾಟಿಂಗ್ ತೋರಿದ ಪಂತ್ ಕೂಡ ಅರ್ಧಶತಕ (49 ಎಸೆತ) ದಾಖಲಿಸಿದರು. ಇದು ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಪಂತ್ ಅವರ ಚೊಚ್ಚಲ ಅರ್ಧಶತಕವಾಗಿದೆ.
ಭಾರತದ ಇನ್ನಿಂಗ್ಸ್ ನ 36ನೇ ಓವರ್ 3ನೇ ಎಸೆತದಲ್ಲಿ ಪೋಲಾರ್ಡ್ ಬೌಲಿಂಗ್ ವೇಳೆ ಪಂತ್ ನೀಡಿದ್ದ ಕ್ಯಾಚ್ ಅನ್ನು ಶೆಲ್ಡನ್ ಕಾಟ್ರೆಲ್ ಕೈಚೆಲ್ಲಿದರು. ಜೀವದಾನ ಪಡೆದ ಪಂತ್ ವಿಕೆಟ್ ಕಾಯ್ದುಕೊಂಡು ಬ್ಯಾಟಿಂಗ್ ಮುಂದುವರಿಸಿದರು. ಈ ಜೋಡಿಯು ನಾಲ್ಕನೇ ವಿಕೆಟ್ ನಷ್ಟಕ್ಕೆ 114 ರನ್‍ಗಳ ಜೊತೆಯಾಟ ಕಟ್ಟಿಕೊಟ್ಟು ತಂಡದ ಮೊತ್ತವನ್ನು ಏರಿಸಿತು. ಸ್ಫೋಟಕ ಬ್ಯಾಟಿಂಗ್‍ಗೆ ಮುಂದಾದ ಶ್ರೇಯಸ್ ಅಯ್ಯರ್ ಇನ್ನಿಂಗ್ಸ್ ನ 36ನೇ ಓವರ್ ನಲ್ಲಿ ವಿಕೆಟ್ ನೀಡಿದರು. 88 ಎಸೆತಗಳಲ್ಲಿ ಶ್ರೇಯಸ್ (5 ಬೌಂಡರಿ, ಸಿಕ್ಸ್) 70 ರನ್ ಗಳಿಸಿ ಪೆವಿಲಿಯನ್‍ಗೆ ತರೆಳಿದ್ದರು.
ಶ್ರೇಯಸ್ ಅಯ್ಯರ್ ಬೆನ್ನಲ್ಲೇ 69 ಎಸೆತಗಳಲ್ಲಿ (7 ಬೌಂಡರಿ, ಸಿಕ್ಸ್) 71 ರನ್ ಗಳಿಸಿದ್ದ ಪಂತ್ ಕೂಡ ವಿಕೆಟ್ ಒಪ್ಪಿಸಿದರು. 40ನೇ ಓವರ್ ಮುಕ್ತಾಯಕ್ಕೆ ಭಾರತ 5 ವಿಕೆಟ್ 210 ರನ್ ಪೇರಿಸಿತು. ಬಳಿಕ ಕೇದಾರ್ ಜಾಧವ್ ಹಾಗೂ ರವೀಂದ್ರ ಜಡೇಜಾ 6ನೇ ವಿಕೆಟ್ ನಷ್ಟಕ್ಕೆ 59 ರನ್ ಗಳ ಜೊತೆಯಾಟ ಕಟ್ಟಿಕೊಟ್ಟರು. ಇನ್ನಿಂಗ್ಸ್ ನ 47ನೇ ಓವರ್ ನ 3ನೇ ಎಸೆತದಲ್ಲಿ ಕೇದಾರ್ ಜಾಧವ್ (40 ರನ್) ಹಾಗೂ ನಾಲ್ಕನೇ ಎಸೆತದಲ್ಲಿ ರವೀಂದ್ರ ಜಡೇಜಾ (21 ರನ್) ವಿಕೆಟ್ ಒಪ್ಪಿಸಿದರು. ಕೊನೆಯ ಓವರ್ ನಲ್ಲಿ ಶಿವಂ ದುಬೆ (9 ರನ್) ಔಟಾದರು. ಈ ಮೂಲಕ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತ್ತು.
9 ಸರಣಿಯಲ್ಲಿ ಭಾರತಕ್ಕೆ ಜಯ:
ಕಳೆದ 13 ವರ್ಷಗಳಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 9 ಸರಣಿಗಳು ನಡೆದಿವೆ. ಎಲ್ಲ ಸರಣಿಯಲ್ಲೂ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. 2006ರಿಂದ ಉಭಯ ದೇಶಗಳ ನಡುವೆ 39 ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 23 ಪಂದ್ಯ ಗೆದ್ದರೆ, 10 ಪಂದ್ಯದಲ್ಲಿ ಸೋಲು ಕಂಡಿದೆ. 6 ಪಂದ್ಯಗಳು ಡ್ರಾ ಆಗಿವೆ. ಈ ವರ್ಷದ ಆಗಸ್ಟ್ ನಲ್ಲಿ ಭಾರತವು ವಿಂಡೀಸ್ ಅನ್ನು 2-0 ಅಂತರದಿಂದ ಸೋಲಿಸಿತ್ತು. ಇತ್ತೀಚೆಗೆ ಟೀಂ ಇಂಡಿಯಾ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2-1 ಅಂತರದಿಂದ ಮಣಿಸಿತ್ತು.
Back-to-back fours from Nicholas Pooran finish the chase! ????
West Indies go 1-0 up in the series ???? #INDvWI | SCORECARD ???? https://t.co/9QkJ4D8HOy pic.twitter.com/iKKnGYqsTY
— ICC (@ICC) December 15, 2019