ಟ್ರಿನಿನಾಡ್: ಅಕ್ಷರ್ ಪಟೇಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 2ನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 2 ವಿಕೆಟ್‍ಗಳ ಅಂತರದ ರೋಚಕ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.
Advertisement
ವೆಸ್ಟ್ ಇಂಡೀಸ್ ನೀಡಿದ 312 ರನ್‍ಗಳ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಅಕ್ಷರ್ ಪಟೇಲ್ ಅಜೇಯ 64 ರನ್ (35 ಎಸೆತ, 3 ಬೌಂಡರಿ, 5 ಸಿಕ್ಸ್) ಚಚ್ಚಿ ಮ್ಯಾಚ್ ಫಿನಿಶ್ ಮಾಡಿದರು. ಉತ್ತಮ ಬ್ಯಾಟಿಂಗ್ ಪ್ರದರ್ಶನದ ನಡುವೆಯೂ ವಿಕೆಟ್ ಕಳೆದುಕೊಂಡು ಸಾಗಿದ ಭಾರತಕ್ಕೆ ಕೊನೆಯ ಓವರ್‌ನಲ್ಲಿ 8 ರನ್‍ಗಳ ಅವಶ್ಯಕತೆ ಇತ್ತು. ಕೊನೆಯ ಓವರ್‌ನ ಮೊದಲ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ ಮುಂದಿನ ಎರಡು ಎಸೆತಗಳಲ್ಲಿ ಸಿರಾಜ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ರನ್ ಕಸಿದರು. ಕೊನೆಯ 3 ಎಸೆತಗಳಲ್ಲಿ ಭಾರತದ ಗೆಲುವಿಗೆ 6 ರನ್ ಬೇಕಾಗಿತ್ತು. 4 ಎಸೆತವನ್ನು ಸಿಕ್ಸರ್‌ಗಟ್ಟಿದ ಅಕ್ಷರ್ ಪಟೇಲ್ 49.4 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್‍ಗಳನ್ನು ಕಳೆದುಕೊಂಡು ಇನ್ನೂ 2 ಎಸೆತ ಬಾಕಿ ಇರುವಂತೆ 2 ವಿಕೆಟ್‍ಗಳ ಜಯ ತಂದುಕೊಟ್ಟರು. ಇದನ್ನೂ ಓದಿ: ಗಂಡು ಮಗುವಿಗೆ ತಂದೆಯಾದ ಕ್ರಿಕೆಟಿಗ ಕೃನಾಲ್ ಪಾಂಡ್ಯ: ಮಗುವಿನ ಹೆಸರು ರಿವೀಲ್
Advertisement
Advertisement
ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಭಾರತ ಗೆದ್ದು ಬೀಗಿದೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ 2007ರ ಬಳಿಕ ಏಕದಿನ ಸರಣಿ ಜಯದ ಅಜೇಯ ಓಟ ಮುಂದುವರಿಸಿ ವಿಶ್ವದಾಖಲೆ ಬರೆಯಿತು.
Advertisement
ವಿಂಡೀಸ್ ನೀಡಿದ ಕಠಿಣ ಗುರಿ ಬೆನ್ನಟ್ಟಿದ ಭಾರತಕ್ಕೆ ಬ್ಯಾಟಿಂಗ್‍ನಲ್ಲಿ ಶುಭಮನ್ ಗಿಲ್ 43 ರನ್ (49 ಎಸೆತ, 5 ಬೌಂಡರಿ) ಮತ್ತು ಶ್ರೇಯಸ್ ಅಯ್ಯರ್ 63 ರನ್ (71 ಎಸೆತ, 4 ಬೌಂಡರಿ, 1 ಸಿಕ್ಸ್) ಸಿಡಿಸಿ ಅಗ್ರಕ್ರಮಾಂಕದಲ್ಲಿ ಆಸರೆಯಾದರು. ಗಿಲ್ ಔಟ್ ಆದ ಬಳಿಕ ಅಯ್ಯರ್, ಸಂಜು ಸ್ಯಾಮ್ಸನ್ 4ನೇ ವಿಕೆಟ್‍ಗೆ 99 ರನ್ (94 ಎಸೆತ) ಜೊತೆಯಾಟವಾಡಿದ್ದು ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸಂಜು ಸ್ಯಾಮ್ಸನ್ 54 ರನ್ (51 ಎಸೆತ, 3 ಬೌಂಡರಿ, 3 ಸಿಕ್ಸ್) ಬಾರಿಸಿ ರನ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಅಕ್ಷರ್ ಪಟೇಲ್ ಬೌಂಡರಿ, ಸಿಕ್ಸರ್ ಸಿಡಿಸುತ್ತ ತಂಡದ ಗೆಲುವಿನ ಜವಾಬ್ದಾರಿ ವಹಿಸಿಕೊಂಡರು. ಇನ್ನೇನು ಪಂದ್ಯ ರೋಚಕ ಹಂತ ತಲುಪಿದ್ದ ವೇಳೆ ಸಿಕ್ಸರ್ ಸಿಡಿಸಿ ಭಾರತಕ್ಕೆ ಜಯದ ಸಿಹಿ ನೀಡಿದರು. ಇದನ್ನೂ ಓದಿ: ಮುಂದಿನ ಗುರಿ 90 ಮೀ. ಎಸೆತ – ಪದಕದ ಬಣ್ಣ ಬದಲಾಯಿಸಲು ಪ್ರಯತ್ನಿಸುತ್ತೇನೆ: ನೀರಜ್ ಚೋಪ್ರಾ
ಶತಕ ಸಿಡಿಸಿ ಶೈನ್ ಆದ ಶಾಯ್ ಹೋಪ್:
ಈ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆಯಿತು. ಶಾಯ್ ಹೋಪ್ ಮತ್ತು ಕೈಲ್ ಮೇಯರ್ಸ್ ಮೊದಲ ವಿಕೆಟ್‍ಗೆ 65 ರನ್ (55 ಎಸೆತ) ಜೊತೆಯಾಟವಾಡಿ ಈ ಜೋಡಿ ಬೇರ್ಪಟ್ಟಿತು. ಬಳಿಕ ಶಾಯ್ ಹೋಪ್ ನಾಯಕ ನಿಕೊಲಸ್ ಪೂರನ್ ತಂಡದ ರನ್ ಹೆಚ್ಚಿಸಲು ಮುಂದಾದರು. ಉತ್ತಮ ಲಯದಲ್ಲಿದ್ದ ಶಯ್ ಹೋಪ್ ಭಾರತದ ಬೌಲರ್‌ಗಳ ವಿರುದ್ಧ ದಿಟ್ಟ ಹೋರಾಟ ನಡೆಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಪೂರನ್ 74 ರನ್ (77 ಎಸೆತ, 1 ಬೌಂಡರಿ, 6 ಸಿಕ್ಸ್) ಸಿಡಿಸಿ ವಿಕೆಟ್ ಕಳೆದುಕೊಂಡರು. ಈ ಮೊದಲು ಈ ಜೋಡಿ 4 ವಿಕೆಟ್‍ಗೆ 117 ರನ್ (126 ಎಸೆತ) ಶತಕದ ಜೊತೆಯಾಟವಾಡಿ ಮಿಂಚಿತು. ಇತ್ತ ಸಿಕ್ಸ್ ಸಿಡಿಸಿ ಶತಕ ಪೂರೈಸಿದ ಶಯ್ ಹೋಪ್ 115 ರನ್ (135 ಎಸೆತ, 8 ಬೌಂಡರಿ, 3 ಸಿಕ್ಸ್) ಬಾರಿಸಿ ವೆಸ್ಟ್ ಇಂಡೀಸ್ ಬೃಹತ್ ಮೊತ್ತಕ್ಕೆ ಕಾರಣರಾದರು.
ಅಂತಿಮವಾಗಿ ವಿಂಡೀಸ್ 50 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 311 ರನ್ ಸಿಡಿಸಿತು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.
Live Tv
[brid partner=56869869 player=32851 video=960834 autoplay=true]