– 2019ರ ವಿಕೆಟ್ ಪಟ್ಟಿಯಲ್ಲಿ ಶಮಿಗೆ ಅಗ್ರಸ್ಥಾನ
ವಿಶಾಖಪಟ್ಟಣಂ: ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದ್ದು, ಕುಲದೀಪ್ ಯಾದವ್ ಹ್ಯಾಟ್ರಿಕ್, ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಶತಕದಿಂದ ಭಾರತವು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 107 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ವಿಶಾಖಪಟ್ಟಣಂನಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ನೀಡಿದ್ದ ಬೃಹತ್ ಮೊತ್ತ 388 ರನ್ ಬೆನ್ನಟ್ಟಿದ ವಿಂಡೀಸ್ ಪಡೆ ಶಾಯ್ ಹೋಪ್ 78 ರನ್, ನಿಕೋಲಸ್ ಪೂರನ್ 75 ರನ್ ಚಚ್ಚಿದ್ದರೂ ಅಂತಿಮವಾಗಿ 43.3 ಓವರ್‌ಗಳಲ್ಲಿ 280 ರನ್‍ಗಳಿಗೆ ಆಲೌಟ್ ಆಯ್ತು. ಈ ಮೂಲಕ ಮೂರು ಪಂದ್ಯಗಳ ಸರಣಿ 1-1 ರಲ್ಲಿ ಸಮಬಲ ಸಾಧಿಸಿದೆ.
Advertisement
HAT-TRICK for @imkuldeep18! ????
First Indian Bowler to have two ODI hat-tricks! pic.twitter.com/cf6100cU1t
— BCCI (@BCCI) December 18, 2019
Advertisement
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ವೆಸ್ಟ್ ಇಂಡೀಸ್ ಭಾರತದ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿಹಾಕುವಲ್ಲಿ ವಿಫಲವಾಯಿತು. ರೋಹಿತ್ ಶರ್ಮಾ 159 ರನ್(138 ಎಸೆತ, 17 ಬೌಂಡರಿ, 5 ಸಿಕ್ಸರ್), ರಾಹುಲ್ 102 ರನ್(104 ಎಸೆತ, 8 ಬೌಂಡರಿ, 3 ಸಿಕ್ಸರ್) ಹೊಡೆದರೆ ಕೊನೆಯಲ್ಲಿ ಶ್ರೇಯಸ್ ಅಯ್ಯರ್ 53 ರನ್(32 ಎಸೆತ, 3 ಬೌಂಡರಿ, 4 ಸಿಕ್ಸರ್), ರಿಷಬ್ ಪಂತ್ 39 ರನ್(16 ಎಸೆತ, 3 ಬೌಂಡರಿ, 4 ಸಿಕ್ಸರ್) ಸಿಡಿಸಿದ ಪರಿಣಾಮ ಭಾರತ ಭಾರೀ ಮೊತ್ತವನ್ನು ಪೇರಿಸಿತ್ತು.
Advertisement
ಬಳಿಕ ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ಆರಂಭಿಕ ಬ್ಯಾಟ್ಸ್‌ಮನ್ ಶಾಯ್ ಹೋಪ್ ಹಾಗೂ ಎವಿನ್ ಲೂಯಿಸ್ ಅವರನ್ನು ಭಾರತದ ಬೌಲರ್ ಗಳು ಕಟ್ಟಿಹಾಕಿದರು. ಈ ಜೋಡಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಇನ್ನಿಂಗ್ಸ್ ನ 10ನೇ ಓವರ್ ಮುಕ್ತಾಯಕ್ಕೆ 56 ರನ್ ಗಳಿಸಿತ್ತು. ಆದರೆ ನಂತರ ಓವರ್ ನಲ್ಲಿ ಶಾರ್ದೂಲ್ ಠಾಕೂರ್ ಎವಿನ್ ಲೂಯಿಸ್ ವಿಕೆಟ್ ಪಡೆದು ವಿಂಡೀಸ್ ತಂಡಕ್ಕೆ ಆಘಾತ ನೀಡಿದರು. ಬಳಿಕ ಮೈದಾನಕ್ಕಿಳಿದ ಶಿಮ್ರಾನ್ ಹೆಟ್ಮೆಲರ್ 4 ರನ್ ಹಾಗೂ ರಾಸ್ಟನ್ ಚೇಸ್ 4 ರನ್ ಗಳಿಸಿ ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.
Advertisement
Two in two for @MdShami11 ????????
Nicholas Pooran and Pollard depart.
West Indies 193/5 #INDvWI pic.twitter.com/U8jSha2xT5
— BCCI (@BCCI) December 18, 2019
ಆರಂಭಿಕ ಬ್ಯಾಟ್ಸ್‌ಮನ್ ಶಾಯ್ ಹೋಪ್‍ಗೆ ಜೊತೆಯಾದ ನಿಕೋಲಸ್ ಪೂರನ್ ಉತ್ತಮ ಜೊತೆಯಾಟ ಕಟ್ಟಿದರು. ಈ ಜೋಡಿಯು ನಾಲ್ಕನೇ ವಿಕೆಟ್‍ಗೆ 106 ರನ್ ಗಳಿಸಿ ತಂಡಕ್ಕೆ ಆಸರೆಯಾಯಿತು. ಆದರೆ ಸ್ಫೋಟಕ ಬ್ಯಾಟಿಂಗ್ ಮುಂದಾದ ನಿಕೋಲಸ್ ಮೊಹಮ್ಮದ್ ಶಮಿ ಎಸೆದ 30ನೇ ಓವರ್ ವಿಕೆಟ್ ಒಪ್ಪಿಸಿದರು. ನಿಕೋಲಸ್ 75 ರನ್ (47 ಎಸೆತ, 6 ಬೌಂಡರಿ, 6 ಸಿಕ್ಸರ್) ಗಳಿಸಿದರು. ಬಳಿಕ ಮೈದಾಕ್ಕಿಳಿದ ವಿಂಡೀಸ್ ನಾಯಕ ಪೋಲಾರ್ಡ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. 5 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದ್ದಾಗ ಕುಲ್‍ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆದು ಪಂದ್ಯಕ್ಕೆ ರೋಚಕ ತಿರುವು ತಂದುಕೊಟ್ಟರು.
ಶಮಿ ದಾಖಲೆ:
2019ರಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ನ್ಯೂಜಿಲ್ಯಾಂಡ್‍ನ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅವರನ್ನು ಮೊಹಮ್ಮದ್ ಶಮಿ ಹಿಂದಿಕ್ಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಒಂದು ವಿಕೆಟ್ ಪಡೆಯುವ ಮೂಲಕ ಟ್ರೆಂಟ್ ಬೌಲ್ಟ್ ಅವರನ್ನು ಸರಿಗಟ್ಟಿದ್ದರು. ಈ ಪಂದ್ಯದಲ್ಲಿ 3 ವಿಕಟ್ ಪಡೆಯುವ ಮೂಲಕ 2019ರಲ್ಲಿ 41 ವಿಕೆಟ್ ಪಡೆದ ದಾಖಲೆ ಬರೆದಿದ್ದಾರೆ. 38 ವಿಕೆಟ್ ಪಡೆದಿದ್ದ ಟ್ರೆಂಟ್ ಬೌಲ್ಟ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಮೂರನೇ ಪಂದ್ಯ ಭಾನುವಾರ ಒಡಿಶಾದ ಕಟಕ್‍ನಲ್ಲಿ ನಡೆಯಲಿದೆ.
#TeamIndia level the series 1-1 ????
Onto the decider at Cuttack! #INDvWI pic.twitter.com/bQ4kn9MXG8
— BCCI (@BCCI) December 18, 2019