ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮತ್ತು ಉದಯೋನ್ಮುಖ ಬ್ಯಾಟ್ಸ್‌ಮನ್ ಪೃಥ್ವಿ ಶಾ ವೆಸ್ಟ್ ಸ್ಥಾನ ಪಡೆಯಲಿದ್ದಾರೆ.
ವಿಶಾಖಪಟ್ಟಣಂನಲ್ಲಿ ಡಿಸೆಂಬರ್ 18 ರಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಬುಮ್ರಾ ಹಾಗೂ ಪೃಥ್ವಿ ಶಾ ನೆಟ್‍ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಬಿಸಿಸಿಐ ಪಂದ್ಯಕ್ಕೂ ಮುನ್ನವೇ ಈ ಇಬ್ಬರು ಆಡಗಾರರ ಫಿಟ್‍ನೆಸ್ ಪರೀಕ್ಷೆ ಮಾಡಲಿದೆ.
Advertisement
Advertisement
ಭಾರತ ತಂಡವು ಜನವರಿಯಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಐದು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಭಾರತ ಆಡಲಿದೆ. ಹೀಗಾಗಿ ಪ್ರವಾಸಕ್ಕೂ ಮುನ್ನ ಈ ಇಬ್ಬರು ಆಟಗಾರರ ಫಿಟ್‍ಎಂದು ಘೋಷಿಸಬೇಕೆಂದು ಆಯ್ಕೆ ಸಮಿತಿ ನಿರ್ಧರಿಸಿದೆ.
Advertisement
ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, ವಿಶಾಖಪಟ್ಟಣದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅನುಭವಿ ಬ್ಯಾಟ್ಸ್‌ಮನ್ ಗಳು ಇರಲಿದ್ದಾರೆ. ಬೌಲಿಂಗ್ ಪಡೆ ಬಲ ಹೆಚ್ಚಿಸಲು ಬುಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅವರ ಬೆನ್ನಿನ ಗಾಯವನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ. ಈ ಎರಡೂ ಸರಣಿಯಲ್ಲಿ ಬುಮ್ರಾ ಅವರನ್ನು ಟೀಂ ಇಂಡಿಯಾದಲ್ಲಿ ಸೇರಿಸಲಾಗುವುದು ಎನ್ನಲಾಗುತ್ತಿದೆ. ಜನವರಿ 5ರಿಂದ 10 ರವರೆಗೆ ಶ್ರೀಲಂಕಾ ವಿರುದ್ಧ ಭಾರತವು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಬಳಿಕ ಜನವರಿ 14ರಿಂದ 19ರವರೆಗೆ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಬುಮ್ರಾ ಅವರನ್ನು ಟೆಸ್ಟ್ ತಂಡದಲ್ಲಿ ಸೇರಿಸಲಾಗಿತ್ತು. ಆದರೆ ಬೆನ್ನು ನೋವಿನಿಂದಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಮತ್ತು ಏಕದಿನ ಪಂದ್ಯಗಳಿಂದ ಬುಮ್ರಾ ವಿಶ್ರಾಂತಿ ಪಡೆದಿದ್ದರು.
ಮತ್ತೊಂದೆಡೆ, ಪೃಥ್ವಿ ಶಾ ಕಳೆದ ವರ್ಷ ನವೆಂಬರ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ನಂತರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಗಾಯಗೊಂಡಿದ್ದರು. ಹೀಗಾಗಿ ಅವರು ಆಸ್ಟ್ರೇಲಿಯಾ ಪ್ರವಾಸದಿಂದ ತವರಿಗೆ ಹಿಂತಿರುಗಿದ್ದರು.
ವೆಸ್ಟ್ ಇಂಡೀಸ್-ಎ ತಂಡದ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯಕ್ಕಾಗಿ ಭಾರತ-ಎ ತಂಡದಲ್ಲಿ ಶಾ ಅವರನ್ನು ಸೇರಿಸಲಾಗಿತ್ತು. ಆದರೆ ಬಿಸಿಸಿಐನಿಂದ ನಿಷೇಧಕ್ಕೆ ಒಳಗಾಗಿ ಕಳೆದ 8 ತಿಂಗಳಿನಿಂದ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಯುವ ಆಟಗಾರ ಪೃಥ್ವಿ ಶಾ, ಸೈಯದ್ ಮಷ್ತಾಕ್ ಅಲಿ ಟ್ರೋಫಿಯಲ್ಲಿ ಕಮ್‍ಬ್ಯಾಕ್ ಮಾಡಿದ್ದರು. ಬುಧವಾರ ನಡೆದ ರಂಜಿ ಟ್ರೋಫಿಯಲ್ಲಿ ಅವರು ದ್ವಿಶತಕ ಬಾರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ರಿಸರ್ವ್ ಓಪನರ್ ಆಗಿ ಪೃಥ್ವಿ ಶಾ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ಶಾ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಪಾದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಗಳಿಸಿದ 2ನೇ ಕಿರಿಯ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಕಳೆದ ವರ್ಷ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾ ರಾಜ್ ಕೋಟ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 134 ರನ್ ಸಿಡಿಸಿದ್ದರು. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೂರ್ನಿಯಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿದ್ದರು. ಆ ಬಳಿಕ ಐಪಿಎಲ್‍ನಲ್ಲಿ ಡೆಲ್ಲಿ ತಂಡದ ಪರ ಆಡಿ 16 ಪಂದ್ಯಗಳಲ್ಲಿ 353 ರನ್ ಗಳಿಸಿದ್ದರು.