ಟ್ರಿನಿನಾಡ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದ್ದು, ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್‌ನತ್ತ ಕಣ್ಣಿಟ್ಟಿದೆ.
ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಸರಣಿ ಗೆದ್ದ ಸಂಭ್ರಮದಲ್ಲಿದ್ದರೆ, ಇತ್ತ ವೆಸ್ಟ್ ಇಂಡೀಸ್ ತವರಿನಲ್ಲಿ ವೈಟ್ ವಾಶ್ ಮುಖಭಂಗದಿಂದ ಪಾರಾಗಲು ಮೂರನೇ ಏಕದಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಎರಡು ಪಂದ್ಯಗಳನ್ನು ಕೂಡ ರೋಚಕವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾಗೆ ಈ ಪಂದ್ಯ ತಮ್ಮ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಉತ್ತಮ ಅವಕಾಶವಾಗಿದೆ. ಇದನ್ನೂ ಓದಿ: ಲವ್ಲಿನಾ ಕೋಚ್‌ಗೆ ಕಾಮನ್ ವೆಲ್ತ್ ಗೇಮ್ಸ್ ಪ್ರವೇಶಿಸಲು ಮಾನ್ಯತೆ
ಶಿಖರ್ ಧವನ್ ನೇತೃತ್ವದ ಯುವ ತಂಡ ವಿಂಡೀಸ್ ವಿರುದ್ಧ ಉತ್ತಮ ಪ್ರದರ್ಶನವನ್ನು ನೀಡಿದೆ. ಈಗಾಗಲೇ ಆರಂಭದ ಎರಡು ಪಂದ್ಯಗಳಲ್ಲಿ ಆಡಿರುವ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಶುಭಮನ್ ಗಿಲ್, ಅಕ್ಷರ್ ಪಟೇಲ್ ತಮ್ಮ ಸಾಮರ್ಥ್ಯವನ್ನು ಈಗಾಗಲೇ ನಿರೂಪಿಸಿದ್ದಾರೆ. ಇದೀಗ ಇವರಿಗೆ ಮೂರನೇ ಪಂದ್ಯದಿಂದ ವಿಶ್ರಾಂತಿ ನೀಡಿ ಬೆಂಚ್ ಕಾಯ್ದ ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದನ್ನೂ ಓದಿ: ಪ್ಲೇಯಿಂಗ್ 11ನಲ್ಲಿ ಹೆಸರಿಲ್ಲ ಆದ್ರೂ ಬೌಲಿಂಗ್ ಮಾಡಿದ ಪ್ರಸಿದ್ಧ್ ಕೃಷ್ಣ!
ವೆಸ್ಟ್ ಇಂಡೀಸ್ ತಂಡ ತವರಿನಲ್ಲಿ ಮೊದಲ ಎರಡು ಪಂದ್ಯ ಸೋತ ಬಳಿಕ ಇದೀಗ ಮೂರನೇ ಏಕದಿನ ಪಂದ್ಯದ ಗೆಲುವಿಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಇರಲು ನಿರ್ಧರಿಸಬಹುದು.
ಭಾರತ ತಂಡ:
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೆ), ಸಂಜು ಸ್ಯಾಮ್ಸನ್ (ವಿ.ಕೆ), ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ:
ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಮೋ ಪಾಲ್, ರೋವ್‍ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್, ಹೇಡನ್ ವಾಲ್ಷ್.