ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಿಂದ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಶಿಖರ್ ಧವನ್ ಮೊಣಕಾಲು ಗಾಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ.
ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶಿಖರ್ ಧವನ್ ಎಡ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ಹೀಗಾಗಿ ಬಿಸಿಸಿಐ ವೈದ್ಯಕೀಯ ತಂಡವು ಮಂಗಳವಾರ ಪರೀಕ್ಷೆ ನಡೆಸಿ, ಗಾಯವನ್ನು ಗುಣಪಡಿಸಲು ಸಮಯ ಬೇಕಾಗುತ್ತದೆ. ಅವರಿಗೆ ಸ್ವಲ್ಪ ಸಮಯದ ವಿಶ್ರಾಂತಿ ಅತ್ಯವಿದೆ ಎಂದು ತಿಳಿಸಿದೆ.
Advertisement
Advertisement
ವಿಕೆಟ್‍ಕೀಪರ್ ವೃದ್ಧಿಮಾನ್ ಸಹಾ ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಅವರ ಬಲಗೈ ಉಂಗುರದ ಬೆರಳು ಮುರಿತಗೊಂಡಿದೆ. ಹೀಗಾಗಿ ಬಿಸಿಸಿಐ ವೈದ್ಯಕೀಯ ತಂಡವು ತಪಾಸಣೆ ನಡೆಸಿ, ಮುಂಬೈನಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆ ಮಾಡಿದೆ.
Advertisement
ಬಿಸಿಸಿಐ ಆಯ್ಕೆ ಸಮಿತಿಯು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಯ ತಂಡವನ್ನು ನವೆಂಬರ್ 21ರಂದು ಪ್ರಕಟಿಸಿತ್ತು. ಈ ಪಟ್ಟಿನಲ್ಲಿ ಸಂಜು ಸಾಮ್ಸನ್ ಅವರಿಗೆ ಸ್ಥಾನ ನೀಡಿರಲಿಲ್ಲ. ಈ ವಿಚಾರವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಭಾರತ ಮಾಜಿ ಕ್ರಿಕೆಟರ್ ಹರ್ಭಜನ್ ಸಿಂಗ್ ಮಂಡಳಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
Advertisement
ಸಂಜು ಸಾಮ್ಸನ್ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಸಾಮ್ಸನ್ ಸದ್ಯ ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ಅವರು ತಮ್ಮ 4 ಪಂದ್ಯಗಳಲ್ಲಿ 112 ರನ್ ಗಳಿಸಿದ್ದಾರೆ. ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಟಿ-20 ಮತ್ತು ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಸರಣಿಯ ಮೊದಲ ಪಂದ್ಯ ಡಿಸೆಂಬರ್ 6ರಂದು ಹೈದರಾಬಾದ್‍ನಲ್ಲಿ ನಡೆಯಲಿದೆ.
ಟಿ-20 ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಸಂಜು ಸ್ಯಾಮ್ಸನ್, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಕುಲದೀಪ್ ಯಾದವ್, ದೀಪಕ್ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್.
ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್, ಶಿವಂ ದುಬೆ, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಕುಲದೀಪ್ ಶಾದ್ ಮತ್ತು ಭುವನೇಶ್ವರ್ ಕುಮಾರ್.
ಟಿ-20 ವೇಳಾಪಟ್ಟಿ:
ಮೊದಲ ಟಿ-20 ಪಂದ್ಯವು ಡಿಸೆಂಬರ್ 6ರಂದು ಹೈದರಾಬಾದ್‍ನಲ್ಲಿ ನಡೆಯಲಿದೆ. ಎರಡನೇ ಪಂದ್ಯವು ಡಿಸೆಂಬರ್ 8ರಂದು ತಿರುವನಂತಪುರಂನಲ್ಲಿ ನಡೆದರೆ, ಕೊನೆಯ ಹಾಗೂ ಮೂರನೇ ಪಂದ್ಯ ಡಿಸೆಂಬರ್ 11ರಂದು ಮುಂಬೈನಲ್ಲಿ ನಡೆಯಲಿದೆ.
ಏಕದಿನದ ಸರಣಿ ವೇಳಾಪಟ್ಟಿ:
ಮೊದಲ ಏಕದಿನ ಪಂದ್ಯವು ಡಿಸೆಂಬರ್ 15ರಂದು ಚೆನ್ನೈನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಡಿಸೆಂಬರ್ 18ರಂದು ವಿಶಾಖಪಟ್ಟಣಂ ಹಾಗೂ ಕೊನೆಯ ಪಂದ್ಯ ಡಿಸೆಂಬರ್ 22ರಂದು ಕಟಕ್‍ನಲ್ಲಿ ನಡೆಯಲಿದೆ.