ಆ್ಯಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 318 ರನ್‍ಗಳ ಅಂತರದ ಗೆಲುವು ಪಡೆದಿದ್ದು, ಪಂದ್ಯದಲ್ಲಿ ಕೆಲ ಪ್ರಮುಖ ದಾಖಲೆಗಳು ನಿರ್ಮಾಣವಾಗಿದೆ.
ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ಪಡೆದ ಅತಿ ಹೆಚ್ಚು ರನ್ ಅಂತರದ ಗೆಲುವು ಇದಾಗಿದೆ. ಅಲ್ಲದೇ 2 ಟೆಸ್ಟ್ ಪಂದ್ಯಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆಲುವು ಪಡೆದ ನಾಯಕ ವಿರಾಟ್ ಕೊಹ್ಲಿ, ವಿದೇಶಿ ನೆಲದಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯಗಳಲ್ಲಿ ತಂಡದ ಪರ ಅತಿ ಹೆಚ್ಚು ಗೆಲುವು ಪಡೆದ ನಾಯಕ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಈ ಹಿಂದೆ ಸೌರವ್ ಗಂಗೂಲಿ ನಾಯಕತ್ವದ ಟೀಂ ಇಂಡಿಯಾ ವಿದೇಶಿ ನೆಲದಲ್ಲಿ 11 ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಪಡೆದಿತ್ತು.
Advertisement
Advertisement
ಟೀಂ ಇಂಡಿಯಾ ಪರ ಒಟ್ಟಾರೆಯಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ನಾಯಕ ಪಟ್ಟಿಯಲ್ಲಿ ಕೊಹ್ಲಿ, ಮಾಜಿ ನಾಯಕ ಧೋನಿರೊಂದಿಗೆ ಮೊದಲ ಸ್ಥಾನ ಹಂಚಿಕೊಂಡಿದ್ದು, ಇವರ ನಾಯಕತ್ವದಲ್ಲಿ ಇದುವರೆಗೂ ಟೀಂ ಇಂಡಿಯಾ ತಲಾ 27 ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಪಡೆದಿದೆ.
Advertisement
ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಂದ್ಯದಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದರು. ಆ ಮೂಲಕ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನೆಲದಲ್ಲಿ 5 ವಿಕೆಟ್ ಗೊಂಚಲು ಸಾಧನೆ ಮಾಡಿದ ಏಷ್ಯಾದ ಮೊದಲ ಆಟಗಾರರಾಗಿದ್ದಾರೆ. ಪಂದ್ಯದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ ರಹಾನೆ ಬರೋಬ್ಬರಿ 2 ವರ್ಷ (17 ಪಂದ್ಯ)ಗಳ ಬಳಿಕ ಶತಕ ಸಿಡಿಸಿದ ಸಾಧನೆ ಮಾಡಿದರು.
Advertisement
ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ20, ಏಕದಿನ ಕ್ರಿಕೆಟ್ ಟೂರ್ನಿಗಳಲ್ಲಿ ಗೆಲುವು ಪಡೆದಿರುವ ಟೀಂ ಇಂಡಿಯಾ, ಐಸಿಸಿ ಟೆಸ್ಟ್ ಚಾಂಪಿಯನ್ಸ್ ಶಿಪನ್ನು ಗೆಲುವಿನೊಂದಿಗೆ ಆರಂಭಿಸಿದೆ. ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ತಂಡ ಪಂದ್ಯದಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ನಾನು ಯಾವುದೇ ನಿರ್ಧಾರ ಕೈಗೊಂಡರು ಆಟಗಾರರು ಅದನ್ನು ಪಾಲಿಸುತ್ತಾರೆ. ಇದುವೆ ತಂಡದ ಉತ್ತಮ ಪ್ರದರ್ಶನಕ್ಕೆ ಕಾರಣ ಎಂದಿದ್ದಾರೆ.