ನಾರ್ತ್ ಸೌಂಡ್: ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ 11 ಜನರ ಪಟ್ಟಿಯಿಂದ ರೋಹಿತ್ ಶರ್ಮಾ ಬದಲಾಗಿ ಹನುಮ ವಿಹಾರಿ ಅವರಿಗೆ ಅವಕಾಶ ನೀಡಲಾಗಿತ್ತು. ಈ ನಿರ್ಧಾರದಿಂದಾಗಿ ಭಾರೀ ಟೀಕೆ ಎದುರಿಸಿದ್ದ ನಾಯಕ ವಿರಾಟ್ ಕೊಹ್ಲಿ ಈಗ ಮೌನ ಮುರಿದಿದ್ದಾರೆ.
ಹನುಮ ವಿಹಾರಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಸಾಮರ್ಥ್ಯವನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 60 ಅಂಕ, ಇಂಗ್ಲೆಂಡಿಗೆ 24 ಅಂಕ – ಟೆಸ್ಟ್ ಚಾಂಪಿಯನ್‍ಶಿಪ್ ಪಾಯಿಂಟ್ ಲೆಕ್ಕಾಚಾರ ಹೇಗೆ?
Advertisement
Advertisement
ಸರಿಯಾದ ಸಂಯೋಜನೆ ಅಗತ್ಯವಾದ ಕಾರಣ ವಿಹಾರಿ ಅವರಿಗೆ ಸ್ಥಾನ ನೀಡಲಾಗಿತ್ತು. ಒಂದು ವೇಳೆ ಅಗತ್ಯಬಿದ್ದರೆ ಅವರು ಬೌಲರ್ ಗಳಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಎಂಬ ವಿಚಾರ ಹೊಂದಿದ್ದೇವು. ಈ ಬಗ್ಗೆ ನಾವು ಮೊದಲು ಸಾಮೂಹಿಕ ಚರ್ಚೆ ನಡೆಸಿದ್ದೇವೆ. ನಂತರ ತಂಡಕ್ಕೆ ಯಾವುದು ಉತ್ತಮ ಎಂದು ನಿರ್ಧರಿಸಲಾಗಿತ್ತು. ಆಡುವ 11 ಜನರ ಬಗ್ಗೆ ಯಾವಾಗಲೂ ಅನೇಕ ಅಭಿಪ್ರಾಯಗಳು ಇರುತ್ತವೆ. ಆದರೆ ತಂಡದ ಹಿತದೃಷ್ಟಿಯಿಂದ ಹುನುಮ ವಿಹಾರಿಗೆ ಮಣೆ ಹಾಕಲಾಯಿತು. ಇದನ್ನು ಜನರು ತಿಳಿದುಕೊಳ್ಳಬೇಕು ಎಂದು ಕೊಹ್ಲಿ ಹೇಳಿದ್ದಾರೆ.
Advertisement
ಹೌದು ನಾನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಆದರೆ ಕೈ ಎತ್ತುವ ಇತರ ಜನರಿಂದ ಅವುಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ನಾವು ಎಲ್ಲರನ್ನೂ ಆನಂದಿಸುತ್ತೇವೆ. ಇದು ನಮ್ಮ ಯಶಸ್ಸಿನ ರಹಸ್ಯವಾಗಿದೆ. ಒಂದಕ್ಕಿಂತ ಹೆಚ್ಚು ರೀತಿಯಲ್ಲಿ ತಂಡಕ್ಕೆ ಕೊಡುಗೆ ನೀಡುವ ಪರಿಸ್ಥಿತಿಯಲ್ಲಿ ನಾನು ಇದ್ದೇನೆ ಎಂಬುದು ಒಂದು ವರದಾನ. ತಂಡವನ್ನು ಅವರ ಕ್ರೆಡಿಟ್ ಮೂಲಕ ಜಯಿಸಬಹುದು ಅಂತ ಭಾವಿಸುವುದಿಲ್ಲ ಎಂದು ತಿಳಿಸಿದ್ದಾರೆ.
Advertisement
ಪಂದ್ಯದಲ್ಲಿ ಭಾರತ ತಂಡದ ಮೊದಲ ಇನ್ನಿಂಗ್ಸ್ ನಲ್ಲಿ ಹನುಮ ವಿಹಾರಿ ಅಷ್ಟೇನು ಉತ್ತಮ ಆಟ ನೀಡಲಿಲ್ಲ. ಈ ವೇಳೆ 32 ರನ್‍ಗಳನ್ನು ಮಾತ್ರ ಗಳಿಸಿದ್ದರು. ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ ಅವರು 93 ರನ್ ಗಳಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. ಇದರಲ್ಲಿ ಅವರು 10 ಬೌಂಡರಿ ಮತ್ತು 1 ಸಿಕ್ಸ್ ಬಾರಿಸಿದರು. ಅವರಲ್ಲದೆ, ಅಜಿಂಕ್ಯ ರಹಾನೆ ಮೊದಲ ಇನ್ನಿಂಗ್ಸ್ ನಲ್ಲಿ 81 ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 102 ರನ್ ಗಳಿಸಿದ್ದಾರೆ. ಕೆ.ಎಲ್.ರಾಹುಲ್ ಮೊದಲ ಇನ್ನಿಂಗ್ಸ್ ನಲ್ಲಿ 44 ರನ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 38 ರನ್ ಕಲೆ ಹಾಕಿ ತಂಡಕ್ಕೆ ನೆರವಾದರು. ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್ ನಲ್ಲಿ 55 ರನ್ ನೀಡಿ 1 ವಿಕೆಟ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 7 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. ಇಶಾಂತ್ ಶರ್ಮಾ ಕೂಡ ಉತ್ತಮ ಬೌಲಿಂಗ್ ಮಾಡಿದ್ದು, ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಪಡೆದಿದ್ದಾರೆ.
ಅಜಿಂಕ್ಯ ರಹಾನೆ ಅವರನ್ನು ಪ್ಲೇಯರ್ ಆಫ್ ದಿ ಮ್ಯಾಚ್ ಎಂದು ಆಯ್ಕೆ ಮಾಡಲಾಯಿತು. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯವು ಆಗಸ್ಟ್ 30 ರಿಂದ ಜಮೈಕಾದ ಸಬಿನಾ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.