ಹರಾರೆ: ಇಶಾನ್ ಕಿಶನ್, ತಿಲಕ್ ವರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ 2ನೇ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ತಂಡ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ನಾಯಕ ಶ್ರೇಯಸ್ ಅಯ್ಯರ್ ಪಡೆಗೆ ಮೊಲದ ಸರಣಿ ಗೆಲುವು ಸಿಕ್ಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತು. ಗುರಿ ಬೆನ್ನತ್ತಿದ ಜಿಂಬಾಬ್ವೆ 129 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿದೆ. 2-0 ಮುನ್ನಡೆ ಸಾಧಿಸಿರುವ ಭಾರತ ಸರಣಿ ಕೈವಶ ಮಾಡಿಕೊಂಡಿದೆ.
ಇಶಾನ್ ಕಿಶನ್ (81) ಮತ್ತು ತಿಲಕ್ ವರ್ಮಾ (ಔಟಾಗದೆ 60) ಅವರ ಅರ್ಧಶತಕಗಳ ನೆರವಿನಿಂದ ಭಾರತ 219/5 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಕಿಶನ್ ಮತ್ತು ತಿಲಕ್ ಕೂಡ ನಾಲ್ಕನೇ ವಿಕೆಟ್‌ಗೆ 94 ರನ್‌ಗಳ ಜೊತೆಯಾಟ ನಡೆಸಿ ಭಾರತವನ್ನು 200 ರನ್‌ಗಳ ಗಡಿ ದಾಟಿಸಿದರು.
ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡವು ಉತ್ತಮ ಆರಂಭ ಪಡೆಯಿತು. ಬ್ರಿಯಾನ್ ಬೆನೆಟ್ 19 ಬಾಲ್‌ಗಳಿಗೆ 3 ಸಿಕ್ಸರ್ ಮತ್ತು ಅಷ್ಟೇ ಬೌಂಡರಿಗಳೊಂದಿಗೆ 32 ರನ್ ಗಳಿಸಿದರು. ಆದರೆ, ಉಳಿದ ಆಟಗಾರರು ತಂಡಕ್ಕೆ ಉತ್ತಮ ರನ್‌ಗಳ ಕೊಡುಗೆ ನೀಡುವಲ್ಲಿ ವಿಫಲರಾದರು. ಅಂತಿಮವಾಗಿ 17.5 ಓವರ್‌ಗಳಲ್ಲಿ 129 ರನ್‌ಗಳಿಗೆ ಆಲೌಟ್ ಆಯಿತು.
