ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಮುಂದಿನ ಆದೇಶದವರೆಗೆ ಇರಾನ್‌ಗೆ ಅನಗತ್ಯ ಪ್ರಯಾಣವನ್ನು ಕೈಗೊಳ್ಳಬಾರದು ಎಂದು ಟ್ರೆಹಾನ್‌ನಲ್ಲಿರುವ (Tehran) ಭಾರತೀಯ ರಾಯಭಾರ (Indian Embassy) ಕಚೇರಿ ಬುಧವಾರ (ಜೂ.24) ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಮಧ್ಯಪ್ರಾಚ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ಸಂಘರ್ಷಕ್ಕೆ ತೆರೆ ಎಳೆಯಲು ಇರಾನ್ ಮತ್ತು ಅಮೆರಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ದಿನಗಳಲ್ಲಿ ಭಾರತ ಮಾರ್ಗಸೂಚಿ ಹೊರಡಿಸಿದೆ. ಪ್ರಾದೇಶಿಕವಾಗಿ ಕೆಲವು ಸಕಾರಾತ್ಮಕ ಬೆಳವಣಿಗೆಗಳು ಕಂಡುಬಂದಿದ್ದರೂ ಕೂಡ ಸದ್ಯಕ್ಕೆ ಇರಾನ್ ಪ್ರವಾಸದ ಯೋಜನೆಗಳನ್ನು ಮುಂದೂಡುವಂತೆ ರಾಯಭಾರ ಕಚೇರಿ ಸಲಹೆ ನೀಡಿದೆ. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಲೋಪ ಆಗಿತ್ತು, ಸರಿಪಡಿಸಿ ಯಶಸ್ವಿಯಾಗಿ ಮರುಪರೀಕ್ಷೆ ನಡೆಸಿದ್ದೇವೆ: ಧರ್ಮೇಂದ್ರ ಪ್ರಧಾನ್
ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು:
ಅನಗತ್ಯ ಪ್ರಯಾಣ ಬೇಡ: ಇರಾನ್‌ನಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯರು ತುರ್ತು ಕೆಲಸಗಳಿಲ್ಲದೆ ಇರಾನ್‌ಗೆ ಪ್ರಯಾಣಿಸುವುದನ್ನು ತಪ್ಪಿಸಬೇಕು.
ಕಡ್ಡಾಯ ನೋಂದಣಿ: ಪ್ರಸ್ತುತ ಇರಾನ್‌ನಲ್ಲಿರುವ ಅಥವಾ ಅತ್ಯಗತ್ಯ ಕೆಲಸದ ನಿಮಿತ್ತ ಅಲ್ಲಿಗೆ ಭೇಟಿ ನೀಡುತ್ತಿರುವ ಎಲ್ಲಾ ಭಾರತೀಯ ನಾಗರಿಕರು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ತಮ್ಮ ವಿವರಗಳನ್ನು ಆದಷ್ಟು ಬೇಗ ನೋಂದಾಯಿಸಿಕೊಳ್ಳಬೇಕು.
ಇರಾನ್‌ನಲ್ಲಿರುವ ಭಾರತೀಯರು ಸ್ಥಳೀಯ ನಿಯಮಗಳನ್ನು ಪಾಲಿಸಬೇಕು ಮತ್ತು ಅಲ್ಲಿನ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರವಾಗಿ ಇತ್ತೀಚಿನ ಮಾಹಿತಿಗಳನ್ನು ಪಡೆದುಕೊಳ್ಳುತ್ತಿರಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಭಾರತದ ಮೊದಲ ಖಾಸಗಿ ಚಿನ್ನದ ಗಣಿ ಆಂಧ್ರಪ್ರದೇಶದಲ್ಲಿ ಉದ್ಘಾಟನೆ
