ವಾಷಿಂಗ್ಟನ್: ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸುವ ಮೊದಲು ನೆರೆಯ ರಾಷ್ಟ್ರಗಳು ತಮ್ಮ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆ (UN) ವೇದಿಕೆಯಲ್ಲಿ ಪಾಕಿಸ್ತಾನಕ್ಕೆ (Pakistan) ಭಾರತ (India) ಎಚ್ಚರಿಕೆ ನೀಡಿದೆ.
ಭಾರತವು ಜಮ್ಮು ಕಾಶ್ಮೀರವನ್ನು (Jammu Kashmir) ವಶಪಡಿಸಿಕೊಂಡಿದೆ ಎಂದು ಪಾಕಿಸ್ತಾನವು ಆರೋಪಿಸಿತ್ತು. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ರುಚಿರಾ ಕಾಂಬೋಜ್ ಮಾತನಾಡಿ, ಪಾಕಿಸ್ತಾನದ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಅಪರಾಧವಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಂತಿ ಹಾಗೂ ಭದ್ರತೆಯ ಕುರಿತು ಮುಕ್ತ ಚರ್ಚೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಹಾನಿಕರ ಹಾಗೂ ದಾರಿತಪ್ಪಿಸುವ ಕೆಲಸವಾಗಿದೆ ಎಂದು ಕಿಡಿಕಾರಿದರು.
Advertisement
Advertisement
ಈ ಹಿಂದೆ ಆ ದೇಶದ ನಾಯಕರೇ ಭಯೋತ್ಪಾದಕ ಗುಂಪುಗಳನ್ನು ಪ್ರೋತ್ಸಾಹಿಸುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಉಗ್ರರರಿಗೆ ತರಬೇತಿ ನೀಡಿ ಭಾರತ ಹಾಗೂ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗುತ್ತದೆ. ಇಂತಹ ಪಾಕಿಸ್ತಾನವು ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎಂದು ಜಗತ್ತಿಗೆ ಹೇಳುತ್ತದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ ಎಲ್ಲವೂ ಭಾರತದ ಅವಿಭಾಜ್ಯ ಅಂಗಗಳು. ಇದರ ಬಗ್ಗೆ ನೀವು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11,12 ರಂದು ಮಹಿಳಾ ಕ್ರೀಡಾ ಹಬ್ಬ: ಡಾ. ನಾರಾಯಣಗೌಡ
Advertisement
Advertisement
ಮಾನವ ಹಕ್ಕುಗಳ ಕುರಿತ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪಾಕಿಸ್ತಾನವು ತನ್ನ ಜನರಿಗೆ ಪ್ರಜಾಪ್ರಭುತ್ವವನ್ನು ನಿರಾಕರಿಸುತ್ತಲೇ ಜಗತ್ತಿಗೆ ನೈತಿಕತೆಯನ್ನು ಬೋಧಿಸುತ್ತಿದೆ. ಪಾಕಿಸ್ತಾನವು ಮೊದಲು ತನ್ನ ಸ್ವಂತ ಮನೆಯನ್ನು ಕ್ರಮಬದ್ಧಗೊಳಿಸಬೇಕು ಎಂದ ಅವರು, ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಹೇಳಿಕೆಯನ್ನು ತಿರಸ್ಕರಿಸಿದರು. ಇದನ್ನೂ ಓದಿ: ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು