ದಿಸ್ಪುರ್: ಮುಂದಿನ ಮೂರು ವರ್ಷಗಳಲ್ಲಿ ಭಾರತ ನಕ್ಸಲಿಸಂ (Naxalism) ಮುಕ್ತ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭರವಸೆ ಕೊಟ್ಟಿದ್ದಾರೆ.
Advertisement
ಅಸ್ಸಾಂನ (Assam) ಸಲೋನಿಬರಿಯಲ್ಲಿ ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ (Sashastra Seema Bal’s 60th Raising Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಮುಂದಿನ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ನಕ್ಸಲ್ ಸಮಸ್ಯೆಯಿಂದ 100% ಮುಕ್ತವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ:ರಾಮಭಕ್ತರಿಗೆ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಲಿ: ವಿಜಯೇಂದ್ರ
Advertisement
Advertisement
ಎಲ್ಲಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಸಂಸ್ಕೃತಿ, ಇತಿಹಾಸ, ಭೂಗೋಳ ಮತ್ತು ಭಾಷೆಯನ್ನು ಸೂಕ್ಷ್ಮವಾಗಿ ಸಂಯೋಜಿಸುವಲ್ಲಿ ವಿಶಿಷ್ಟ ಪಾತ್ರ ವಹಿಸುತ್ತದೆ. ಅಲ್ಲದೇ ಗಡಿ ಪ್ರದೇಶಗಳಲ್ಲಿ ಜನರನ್ನು ದೇಶದ ಇತರ ಭಾಗಗಳಿಗೆ ಹತ್ತಿರವಾಗುವಂತೆ ಮಾಡುತ್ತದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ ಅಂಗವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
Advertisement
ಕಳೆದ ನವೆಂಬರ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಛತ್ತೀಸ್‍ಗಢದಿಂದ ನಕ್ಸಲಿಸಂ ನಿರ್ಮೂಲನೆ ಮಾಡುವ ಭರವಸೆಯನ್ನು ನೀಡಿದ್ದರು. ಇದಕ್ಕೂ ಮುನ್ನ ಕಾಂಗ್ರೆಸ್ ನಕ್ಸಲಿಸಂ ಅನ್ನು ಪ್ರೋತ್ಸಾಹಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಒಂಬತ್ತು ವರ್ಷಗಳ ಆಡಳಿತದಲ್ಲಿ ನಕ್ಸಲ್ ಹಿಂಸಾಚಾರದ ಘಟನೆಗಳು 52% ರಷ್ಟು ಕಡಿಮೆಯಾಗಿದೆ ಎಂದಿದ್ದರು. ಇದನ್ನೂ ಓದಿ: ಅಗ್ನಿ ತೀರ್ಥ ಕಡಲತೀರದಲ್ಲಿ ನರೇಂದ್ರ ಮೋದಿ ಪವಿತ್ರ ಸ್ನಾನ