– ಚೀಫ್ ಆಫ್ ಡಿಫೆನ್ಸ್ ನೇಮಕ: ಐತಿಹಾಸಿಕ ಘೋಷಣೆ
– ಸೇನೆ ಬಗ್ಗೆ ಪ್ರಧಾನಿ ಮೆಚ್ಚುಗೆ
ನವದೆಹಲಿ: ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವ್ ಆಗಲು ಅಭಿಯಾನ ಆರಂಭವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಚೀಲವನ್ನು ನಮ್ಮಿಂದ ನಿರೀಕ್ಷಿಸಬೇಡಿ ಎಂಬ ಬೋರ್ಡ್ ಪ್ರತಿ ಅಂಗಡಿಯಲ್ಲೂ ಇರಲಿ. ಪ್ಲಾಸ್ಟಿಕ್ ಬ್ಯಾಗ್ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾಗ್‍ಗಳನ್ನು ಬಳಕೆ ಮಾಡಬೇಕಿದೆ ಎಂದು ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ
Advertisement
PM Modi: Can we free India from single use plastic? Time for implementing this idea is now.Let a important step in this direction be made on 2nd October. #IndependenceDayIndia pic.twitter.com/Bed1My0WNp
— ANI (@ANI) August 15, 2019
Advertisement
ಸ್ವದೇಶಿಯ ಉತ್ಪನ್ನಗಳನ್ನೇ ಹೆಚ್ಚಾಗಿ ಬಳಕೆ ಮಾಡಿ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸೋಣ. ದೇಶದಲ್ಲಿರುವ ಬಲಿಷ್ಠ ಸರ್ಕಾರವನ್ನು ಪ್ರಪಂಚವೇ ಗುರುತಿಸಿದೆ. ವಿದೇಶದಕ್ಕೆ ಪ್ರತಿ ಜಿಲ್ಲೆಯಿಂದಲೂ ಒಂದಲ್ಲ ಒಂದು ರೀತಿಯ ಉತ್ಪನ್ನಗಳು ರಫ್ತು ಮಾಡಬೇಕು ಎಂದು ತಿಳಿಸಿದರು.
Advertisement
ದೇಶದ ಅಭಿವೃದ್ಧಿಗೆ ಶಾಂತಿ ಹಾಗೂ ಸುರಕ್ಷತೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಿದ ಸೈನಿಕರಿಗೆ, ಭದ್ರತಾ ಪಡೆಗೆ ನಾನು ನಮಿಸುತ್ತೇನೆ. ನಮ್ಮ ನೆರೆಯ ದೇಶಗಳು ಭಯೋತ್ಪಾದನೆಗೆ ತತ್ತರಿಸಿ ಹೋಗಿವೆ. ಭಾರತೀಯ ರಕ್ಷಣಾ ಪಡೆಯು ದೇಶದ ಸಂರಕ್ಷಣೆಗಾಗಿ ಪ್ರಶಂಸನೀಯ ಕೆಲಸ ಮಾಡಿವೆ ಎಂದರು.
Advertisement
ಭೂ, ವಾಯು ಹಾಗೂ ನೌಕಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ನೇಮಕ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಅವರು ಐತಿಹಾಸಿದ ಘೋಷಣೆ ಮಾಡಿದ್ದಾರೆ.
ದೇಶವು ಬಾಹ್ಯಾಕಾಶದಲ್ಲಿ ಹೊಸ ಮೈಲುಗಲ್ಲು ಇಟ್ಟಿದೆ. ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೆಲವೇ ದಿನಗಳಲ್ಲಿ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
https://www.youtube.com/watch?v=XWI-1Nqwnxc