ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

- ಫ್ರಂಟ್‍ಲೈನ್ ವರ್ಕರ್ಸ್‍ಗೆ ಬೂಸ್ಟರ್ ಡೋಸ್

Advertisements

– ಶಾಲಾ-ಕಾಲೇಜುಗಳಲ್ಲಿ ವಾಕ್ಸಿನ್

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ.

ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲಾ- ಕಾಲೇಜುಗಳಲಲ್ಲಿ ಲಸಿಕೆ ನೀಡಲಾಗುವುದು. ಫ್ರಂಟ್‍ಲೈನ್ ವರ್ಕರ್ಸ್‍ಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ

Advertisements

ಮೊದಲಿಗೆ ಎಲ್ಲರಿಗೂ ಕ್ರಿಸ್‍ಮಸ್ ಶುಭಾಶಯ ತಿಳಿಸಿದ ಅವರು, ವಿಶ್ವದಲ್ಲೆಡೆ ಓಮಿಕ್ರಾನ್ ಹೆಚ್ಚಾಗುತ್ತಿದೆ. ಹೀಗಾಗಿ ಲಸಿಕೆ ಪಡೆಯದವರು ಕೂಡಲೇ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.

ಮೋದಿ ಹೇಳಿದ್ದು ಏನು?
ಕೊಮೊರ್ಬಿಡಿಟಿ ಹೊಂದಿರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಶಿಫಾರಸಿನ ಮೇರೆಗೆ 2022ರ ಜನವರಿ 10 ರಿಂದ ಬೂಸ್ಟರ್‌ ಡೋಸ್‌ಗಳಿಗೆ ಅರ್ಹರಾಗಿರುತ್ತಾರೆ. ಇದನ್ನೂ ಓದಿ: ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ

Advertisements

ಕೋವಿಡ್ 19 ರ ಗಂಭೀರತೆಯನ್ನು ಅರಿತು ಇಂದು ಭಾರತದಲ್ಲಿ 141 ಕೋಟಿಗೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ. 90% ಕ್ಕಿಂತ ಹೆಚ್ಚು ಅರ್ಹ ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ಹಾಕಲಾಗಿದೆ.

ಭಾರತವು 18 ಲಕ್ಷ ಪ್ರತ್ಯೇಕ ಹಾಸಿಗೆಗಳು, 5 ಲಕ್ಷ ಆಮ್ಲಜನಕ ಬೆಂಬಲಿತ ಹಾಸಿಗೆಗಳು, 1.40 ಲಕ್ಷ ICU ಹಾಸಿಗೆಗಳು, 90,000 ಮಕ್ಕಳ ICU ಮತ್ತು ICU ಅಲ್ಲದ ಹಾಸಿಗೆಗಳನ್ನು ಹೊಂದಿದೆ. ನಮ್ಮಲ್ಲಿ 3,000 ಕ್ಕೂ ಹೆಚ್ಚು ಪಿಎಸ್‌ಎ ಆಮ್ಲಜನಕ ಘಟಕಗಳಿವೆ, 4 ಲಕ್ಷ ಆಮ್ಲಜನಕ ಸಿಲಿಂಡರ್‌ಗಳನ್ನು ರಾಷ್ಟ್ರದಾದ್ಯಂತ ವಿತರಿಸಲಾಗಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್

ಕೋವಿಡ್‌ನ ಹೊಸ ಓಮಿಕ್ರಾನ್ ರೂಪಾಂತರದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಭಯಪಡಬೇಡಿ ಆದರೆ ಜಾಗರೂಕರಾಗಿರಿ ಮತ್ತು ನಿಯಮಿತವಾಗಿ ಮಾಸ್ಕ್‌ ಧರಿಸಿ ಮತ್ತು ಕೈಗಳನ್ನು ಸ್ವಚ್ಛವಾಗಿಡಿ.

Advertisements
Exit mobile version