ಬ್ರಿಡ್ಜ್‌ಟೌನ್: 11 ವರ್ಷಗಳ ನಂತರ ಕೊನೆಗೂ ಭಾರತ ಐಸಿಸಿ ಟ್ರೋಫಿಯನ್ನು (ICC Trophy) ಗೆದ್ದುಕೊಂಡಿದೆ.
ಹೌದು. 2013ರಲ್ಲಿ ಕೊನೆಯ ಬಾರಿಗೆ ಐಸಿಸಿ (ICC) ಆಯೋಜಿಸಿದ ಟ್ರೋಫಿಯನ್ನು ಭಾರತ ಗೆದ್ದುಕೊಂಡಿತ್ತು. ನಂತರ ಭಾರತ ಕಳೆದ 10 ವರ್ಷಗಳಿಂದ ಪ್ರಶಸ್ತಿಯ ಸನಿಹ ಬಂದು ಕೊನೆಯಲ್ಲಿ ಎಡವುತಿತ್ತು.
Advertisement
2013 ರಲ್ಲಿ ಎಂಎಸ್ ಧೋನಿ (MS Dhoni) ನಾಯಕತ್ವದ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 5 ರನ್‌ಗಳಿಂದ ಮಣಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಮುಡಿಗೇರಿಸಿಕೊಂಡಿತ್ತು. ಈ ಟ್ರೋಫಿಯ ಬಳಿಕ ಇಲ್ಲಿಯವರೆಗೆ ಐಸಿಸಿ ಆಯೋಜಿಸಿದ ಒಂದೇ ಒಂದು ಟ್ರೋಫಿಯನ್ನು ಗೆದ್ದುಕೊಂಡಿಲ್ಲ.
Advertisement
Advertisement
ಅದರಲ್ಲೂ ಕಳೆದ 12 ತಿಂಗಳಿನಲ್ಲಿ ಭಾರತ ಮೂರು ಬಾರಿ ಫೈನಲ್ ಪ್ರವೇಶಿಸಿತ್ತು. ಕಳೆದ ವರ್ಷದ ಜೂನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲಿನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ನಂತರ ಭಾರತದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದರೆ ಮೂರನೇ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತ ಈ ಬಾರಿ ಟಿ20 ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
Advertisement
ಯಾವ ವರ್ಷ ಏನಾಗಿತ್ತು?
2014: ಟಿ20 ವಿಶ್ವಕಪ್
ವಿಶ್ವಕಪ್ ಟಿ20 ಫೈನಲ್‌ನಲ್ಲಿ ಶ್ರೀಲಂಕಾ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಭಾರತ 4 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿದರೆ ಶ್ರೀಲಂಕಾ 4 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತ್ತು.
2015: ವಿಶ್ವಕಪ್
ವಿಶ್ವಕಪ್ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 328 ರನ್ ಹೊಡೆದರೆ ಭಾರತ 233 ರನ್‌ಗಳಿಗೆ ಆಲೌಟ್ ಆಗಿತ್ತು.
2016: ಟಿ20 ವಿಶ್ವಕಪ್
ಮುಂಬೈಯಲ್ಲಿ ನಡೆದ ಟಿ20 ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ರೋಚಕ 7 ವಿಕೆಟ್ ಜಯ ಸಾಧಿಸಿತ್ತು. ಭಾರತ 2 ವಿಕೆಟ್ ನಷ್ಟಕ್ಕೆ 192 ರನ್ ಹೊಡೆದರೆ ವಿಂಡೀಸ್ 19.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಹೊಡೆದಿತ್ತು.
2017: ಐಸಿಸಿ ಚಾಂಪಿಯನ್ಸ್ ಟ್ರೋಫಿ
ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಸೋತಿತ್ತು. ಮೊದಲು ಬ್ಯಾಟ್ ಮಾಡಿದದ ಪಾಕಿಸ್ತಾನ 4 ವಿಕೆಟ್ ನಷ್ಟಕ್ಕೆ 338 ರನ್ ಹೊಡೆದರೆ ಭಾರತ 158 ರನ್‌ಗಳಿಗೆ ಆಲೌಟ್ ಆಗಿತ್ತು.
2019: ವಿಶ್ವಕಪ್
ಸೆಮಿಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 239 ರನ್ ಗಳಿಸಿದ್ದರೆ ಭಾರತ 221 ರನ್ ಗಳಿಸಿ ಆಲೌಟ್ ಆಗಿತ್ತು. ಎಂಸ್ ಧೋನಿ ರನೌಟ್ ಆಗಿದ್ದು ಪಂದ್ಯದ ಗತಿಯನ್ನೇ ಬದಲಾಯಿಸಿತ್ತು. 92 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದಾಗ ಧೋನಿ ಮತ್ತು ಜಡೇಜಾ 7ನೇ ವಿಕೆಟಿಗೆ 104 ಎಸೆತಗಳಲ್ಲಿ 116 ರನ್ ಜೊತೆಯಾಟವಾಡಿ ಪಂದ್ಯವನ್ನು ಭಾರತದತ್ತ ವಾಲಿಸಿದ್ದರು. ಧೋನಿ ರನೌಟ್ ಬಲಿಯಾಗುವ ವೇಳೆ ಭಾರತಕ್ಕೆ 10 ಎಸೆತಗಳಲ್ಲಿ 25 ರನ್ ಅಗತ್ಯವಿತ್ತು
2021 ಟಿ20 ವಿಶ್ವಕಪ್
ಐಸಿಸಿ ಟೂರ್ನಿ ಪೈಕಿ 2021 ಟಿ20 ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಕೆಟ್ಟ ಸಾಧನೆ ಮಾಡಿತ್ತು. ವಿರಾಟ್ ಕೊಹ್ಲಿ ನೇತೃತ್ವದ ಭಾರತ ಗುಂಪು ಹಂತದಲ್ಲೇ ಹೊರ ಬಿದ್ದಿತ್ತು. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತಿದ್ದರೆ ಸ್ಕಾಟ್‌ಲ್ಯಾಂಡ್ ವಿರುದ್ಧ ಮಾತ್ರ ಗೆದ್ದಿತ್ತು.
2022 ಟಿ20 ವಿಶ್ವಕಪ್
ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಭಾರತ 6 ವಿಕೆಟ್ ನಷ್ಟಕ್ಕೆ 168 ರನ್ ಹೊಡೆದರೆ ಇಂಗ್ಲೆಂಡ್ ಕೇವಲ 16 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 170 ರನ್ ಹೊಡೆದಿತ್ತು.
2023 ವಿಶ್ವಕಪ್
ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳ ಜಯಗಳಿಸಿ ಕಪ್ ಗೆದ್ದುಕೊಂಡಿತ್ತು. ಭಾರತ 240 ರನ್‌ಗಳಿಗೆ ಆಲೌಟ್ ಆಗಿದ್ದರೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು.