Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

Cricket

Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

Public TV
Last updated: July 21, 2024 7:33 pm
Public TV
Share
2 Min Read
Richa Ghosh
SHARE

ಡಂಬುಲ್ಲಾ: ರಿಚಾ ಘೋಷ್‌ (Richa Ghosh) ಹಾಗೂ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಅವರ ಭರ್ಜರಿ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್‌ ತಂಡವು (India Womens Team) ಯುಎಇ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್‌ಗೆ ಇನ್ನಷ್ಟು ಹತ್ತಿರವಾಗಿದೆ.

Richa Ghosh 2

ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತೆಯರ ತಂಡ 20 ಓವರ್‌ಗಳಲ್ಲಿ 5 ವಿಕೆಟ್​ ನಷ್ಟಕ್ಕೆ ಭರ್ಜರಿ 201 ರನ್ ಗಳಿಸಿತ್ತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಸಹ ಆಗಿದೆ. 202 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಯುಎಇ (United Arab Emirates Women) ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 123 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

Ind vs UAE

ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ, ಮತ್ತೊಂದೆಡೆ ಬ್ಯಾಟರ್‌ಗಳ ಬಲದಿಂದ ರನ್‌ ಪೇರಿಸುತ್ತಾ ಸಾಗಿತ್ತು. ಕೊನೇ 2 ಓವರ್‌ಗಳಲ್ಲಿ ರಿಚಾ ಘೋಷ್‌ ಹಾಗೂ ಹರ್ಮನ್‌ ಪ್ರೀತ್‌ ( Harmanpreet Kaur) ತಮ್ಮ ಸ್ಫೋಟಕ ಪ್ರದರ್ಶನದಿಂದ 37 ರನ್‌ ಕಲೆಹಾಕುವ ಮೂಲಕ 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಭಾರತದ ಪರ ರಿಷಾ ಘೋಷ್‌ 64 ರನ್‌ (29 ಎಸೆತ, 1 ಸಿಕ್ಸರ್‌, 12 ಬೌಂಡರಿ), ಹರ್ಮನ್‌ ಪ್ರೀತ್‌ ಕೌರ್‌ 66 ರನ್‌ (47 ಎಸೆತ, 1 ಸಿಕ್ಸರ್, 7 ಬೌಂಡರಿ), ಶಫಾಲಿ ವರ್ಮಾ 37 ರನ್‌, ಸ್ಮೃತಿ ಮಂಧಾನ 13 ರನ್‌, ದಯಾಳನ್‌ ಹೇಮಲತಾ 2 ರನ್‌, ಜೆಮಿಮಾ ರೊಡ್ರಿಗ್ಸ್‌ 14 ರನ್‌ ಗಳಿಸಿ ಮಿಂಚಿದರು.

ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಯುಎಇ ಪರ ಇಶಾ ಓಜಾ 38 ರನ್‌, ಕವಿಶ ಈಗೋಡಗೆ 40 ಗಳಿಸಿದರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಔಟಾದರು.

ಬೌಲರ್‌ಗಳ ಕಮಾಲ್‌:
ದೊಡ್ಡ ಮೊತ್ತ ಬೆನ್ನಟ್ಟಲು ಮುಂದಾದ ಯುಎಇ ತಂಡವೂ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಪವರ್‌ ಪ್ಲೇನಲ್ಲೇ ಎದುರಾಳಿ ಬೌಲರ್‌ಗಳನ್ನು ಯಶಸ್ವಿಯಾಗಿ ಕಟ್ಟಿಹಾಕಿದರು. ದೀಪ್ರಿ ಶರ್ಮಾ 2 ವಿಕೆಟ್‌ ಕಿತ್ತರೆ, ರೇಣುಕಾ ಸಿಂಗ್‌, ತನುಜಾ ಕನ್ವರ್‌, ಪೂಜಾ ವಸ್ತ್ರಕಾರ್‌, ರಾಧಾ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಮುಂದಿನ ಪಂದ್ಯ ಗೆದ್ದರೆ ಅಧಿಕೃತವಾಗಿ ಸೆಮಿಫೈನಲ್‌ಗೆ ಪ್ರವೇಶಿಸಲಿದೆ.

TAGGED:Esha OzaHarmanpreet KaurRicha GhoshuaeWomens Asia Cupಭಾರತಮಹಿಳಾ ಏಷ್ಯಾಕಪ್ಯುಎಇರಿಚಾ ಘೋಷ್ಹರ್ಮನ್ ಪ್ರೀತ್ ಕೌರ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
41 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
44 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
60 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
2 hours ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?