– ಮೊಹಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿಗೆ 6 ವಿಕೆಟ್ ಉಡೀಸ್
ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ (Team India) 8ನೇ ಬಾರಿಗೆ ಏಷ್ಯಾಕಪ್ (Asia Cup 2023) ಕಿರೀಟವನ್ನ ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
????????????????. ????. ????????????! ????
A clinical show in the summit clash! ????????
A resounding 10-wicket win to clinch the #AsiaCup2023 title ????????
Well done, #TeamIndia! ????????#INDvSL pic.twitter.com/M9HnJcVOGR
— BCCI (@BCCI) September 17, 2023
Advertisement
ಜೊತೆಗೆ ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
Advertisement
Advertisement
ಭಾನುವಾರ ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ (Sri Lanka) ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
Advertisement
ಕಡಿಮೆ ರನ್ ಗುರಿ ಪಡೆದ ಹಿನ್ನೆಲೆಯಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಂಡಿತು. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್ (Shubman Gill) ಜೊತೆಯಾಗಿ ಇಶಾನ್ ಕಿಶನ್ (Ishan Kishan) ಅವರನ್ನ ಆರಂಭಿಕರಾಗಿ ಕಣಕ್ಕಿಳಿಸಿದರು. ಆರಂಭದಿಂದಲೇ ಲಂಕಾ ಬೌಲರ್‌ಗಳ ಬೆಂಡೆತ್ತಿದ್ದ ಕಿಶನ್ ಹಾಗೂ ಗಿಲ್ ಜೋಡಿ ಕೇವಲ 6.1 ಓವರ್‌ನಲ್ಲೇ 51 ರನ್ ಸಿಡಿಸಿ ಮ್ಯಾಚ್ ಮುಗಿಸಿತು. ಇಶಾನ್ ಕಿಶನ್ 18 ಎಸೆತಗಳಲ್ಲಿ 23 ರನ್, ಶುಭಮನ್ ಗಿಲ್ 19 ಎಸೆತಗಳಲ್ಲಿ 27 ರನ್ ಗಳಿಸಿ ಮಿಂಚಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು ಕಣಕ್ಕಿಳಿದಿದ್ದ ಶ್ರೀಲಂಕಾ ತಂಡ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್ ಆಗುವ ಮೂಲಕ 39 ವರ್ಷಗಳ ನಂತರ ಏಷ್ಯಾಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಕಡಿಮೆ ರನ್ ದಾಖಲಿಸಿದ ಕೆಟ್ಟ ದಾಖಲೆಯನ್ನೂ ಹೆಗಲಿಗೇರಿಸಿಕೊಂಡಿತು. 1984ರ ಏಷ್ಯಾಕಪ್ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿರುದ್ಧ 41 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆ ನಂತರ 1986 ರಲ್ಲಿ ಪಾಕಿಸ್ತಾನದ ವಿರುದ್ಧ 33.5 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಗಿತ್ತು.
ಆರಂಭಿಕರಾಗಿ ಕಣಕ್ಕಿಳಿದ ಕುಶಲ್ ಪೆರೇರ ಮೊದಲ ಓವರ್‌ನಲ್ಲೇ ಜಸ್ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಈ ಬೆನ್ನಲ್ಲೇ ಮಾರಕ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್ 4ನೇ ಓವರ್‌ನಲ್ಲಿ ಕೇವಲ ನಾಲ್ಕು ರನ್ ಬಿಟ್ಟುಕೊಟ್ಟು 4 ವಿಕೆಟ್ ಉರುಳಿಸಿದರು. ಆ ನಂತರವೂ ದಾಳಿ ಮುಂದುವರಿಸಿದ ಸಿರಾಜ್ 6ನೇ ಮತ್ತು 12ನೇ ಓವರ್‌ನಲ್ಲಿ ಒಂದೊಂದು ವಿಕೆಟ್ ಪಡೆದರು. ಇದರಿಂದ ಲಂಕಾ ಮಕಾಡೆ ಮಲಗಿತು.
ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್), ಕುಶಲ್ ಮೆಂಡಿಸ್ (17 ರನ್), ಧನಂಜಯ ಡಿ ಸಿಲ್ವಾ (4 ರನ್), ದುನಿತ್ ವೆಲ್ಲಾಳ (8 ರನ್) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್ ಮಧೂಶನ್ 1 ರನ್ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ಲಂಕಾ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್, 7 ಓವರ್‌ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್ ನೀಡಿ 3 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
Web Stories