ಮುಂಬೈ: 2023ಕ್ಕೆ ಪಾಕಿಸ್ತಾನ ಆಯೋಜಿಸುವ ಏಷ್ಯಾಕಪ್ ಏಕದಿನ ಕ್ರಿಕೆಟ್ (AisaCup ODI Cricket) ಟೂರ್ನಿಗಾಗಿ ಭಾರತ ತಂಡವು (Team India) ಪಾಕಿಸ್ತಾನಕ್ಕೆ (Pakistan) ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (JayShah) ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗಷ್ಟೇ ಬಿಸಿಸಿಐ (BCCI) 2023ರ ಏಷ್ಯಾಕಪ್ ಏಕದಿನ ಕ್ರಿಕೆಟ್ ಆಡಲು ಭಾರತ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರ (Central Government Of India) ತೀರ್ಮಾನ ತೆಗೆದುಕೊಂಡ ಬಳಿಕ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು. ಇದನ್ನೂ ಓದಿ: 2023ರ ಏಕದಿನ AisaCup ಟೂರ್ನಿಗೆ ಪಾಕಿಸ್ತಾನಕ್ಕೆ ಲಗ್ಗೆ ಇಡಲಿದೆ ಭಾರತ
ಇಂದು ನಡೆದ ಬಿಸಿಸಿಐ ಸದಸ್ಯರ 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾರತ – ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬುದಾಗಿ ಜಯ್ ಶಾ (Jay Shah) ಸ್ಪಷ್ಟಪಡಿಸಿದ್ದಾರೆ. 2023ರ ಏಷ್ಯಾಕಪ್ (AisaCup 2023) ಅನ್ನು ಭಾರತ ತಟಸ್ಥ ಸ್ಥಳದಲ್ಲಿ ಬೇಕಾದರೆ ಆಡಬಹುದು. ಆದರೆ ಪಾಕಿಸ್ತಾನದಲ್ಲಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿಫಾಲಿ, ದೀಪ್ತಿ ಆಟಕ್ಕೆ ಥಾಯ್ಲೆಂಡ್ ಥಂಡಾ – ಏಷ್ಯಾಕಪ್ ಫೈನಲ್‍ಗೆ ಭಾರತ
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.
ಭಾರತ ಮತ್ತು ಪಾಕಿಸ್ತಾನ ಇತ್ತಂಡಗಳ ನಡುವಿನ ಪಂದ್ಯವು ಯಾವಾಗಲೂ ರಣರೋಚಕವಾಗಿರುತ್ತವೆ. ಏಷ್ಯಾಕಪ್-2022ರ ಬಳಿಕ ಇದೇ ಅಕ್ಟೋಬರ್ 23ರಂದು ಟಿ20 ವಿಶ್ವಕಪ್‌ನಲ್ಲಿ ಮತ್ತೆ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಟಿಕೆಟ್‌ಗಳು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸೋಲ್ಡೌಟ್ ಆಗಿವೆ.