ಲಕ್ನೋ: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಭಾರತೀಯ ವಾಯುಪಡೆಯ (Indian Air Force) ಸಿವಿಲ್ ಎಂಜಿನಿಯರ್ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.
ಹತ್ಯೆಗೀಡಾದ ಅಧಿಕಾರಿಯನ್ನು ಎಸ್‌ಎನ್ ಮಿಶ್ರಾ (51) ಎಂದು ಗುರುತಿಸಲಾಗಿದೆ. ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯ ಮೂಲಕ ಗುಂಡು ಹಾರಿಸಿದ್ದಾನೆ ಎಂದು ಪುರಾಮುಫ್ತಿ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ಮನೋಜ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ | ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – 16 ನಕ್ಸಲರ ಹತ್ಯೆ
ಗುಂಡು ಅವರ ಎದೆಗೆ ತಗುಲಿತ್ತು. ಅವರನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಿಶ್ರಾ ಅವರಿಗೆ ಪತ್ನಿ, ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾರೆ. ಕುಟುಂಬದಿಂದ ದೂರು ದಾಖಲಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್‌ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ