ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ ಎಂದು ಭಾರತೀಯ ವಾಯುಪಡೆ ಹೇಳಿದೆ.
Advertisement
ಬಿಪಿನ್ ರಾವತ್ ಮತ್ತು ಇತರ 13 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ದುರಂತವಾಗಿತ್ತು. ಹೆಲಿಕಾಪ್ಟರ್ ದುರಂತಕ್ಕೆ ಯಾಂತ್ರಿಕ ವೈಫಲ್ಯ, ವಿಧ್ವಂಸಕ ಅಥವಾ ನಿರ್ಲಕ್ಷ್ಯ ಕಾರಣವಲ್ಲ. ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಕಾರಣ ಪತನಗೊಂಡಿದೆ ಭಾರತೀಯ ವಾಯುಪಡೆ ತಿಳಿಸಿದೆ. ಇದನ್ನೂ ಓದಿ: 190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ
Advertisement
Advertisement
ಕಳೆದ ವರ್ಷ ಡಿಸೆಂಬರ್ ರಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪ್ರಯಾಣಿಸುತ್ತಿದ್ದರು. ತಮಿಳುನಾಡಿನ ಕೂನೂರ್ ಬಳಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 12 ಸೇನಾ ಅಧಿಕಾರಿಗಳು ಮೃತಪಟ್ಟಿದ್ದರು. ಈ Mi-17 V5 ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಸಿದ ಮೂರು ಪಡೆಗಳನ್ನು ಒಳಗೊಂಡ ತನಿಖಾ ತಂಡ ತನ್ನ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.
Advertisement
ವಿಚಾರಣೆಯ ನೇತೃತ್ವವನ್ನು ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ವಹಿಸಿದ್ದರು. ಈ ತಂಡವು ಹೆಲಿಕಾಪ್ಟರ್ನಲ್ಲಿ ಸಂಭವಿಸಿರಬಹುದಾದ ಮಾನವ ದೋಷ ಅಥವಾ ಹೆಲಿಕಾಪ್ಟರ್ ಲ್ಯಾಂಡಿಂಗ್ ತಯಾರಿಯಲ್ಲಿ ನಡೆದಿರಬಹುದಾದ ಸಮಸ್ಯೆಯ ಸಂಭವನೀಯ ಸನ್ನಿವೇಶಗಳನ್ನು ಪರಿಶೀಲನೆ ನಡೆಸಿ ಮೋಡ ಕಾರಣ ಎಂದು ಹೇಳಿದೆ.