ಶ್ರೀನಗರ: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 24 ಗಂಟೆಯಲ್ಲಿ 9 ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ.
ದಕ್ಷಿಣ ಕಾಶ್ಮೀರದ ಬಾಟ್ಪುರ್‍ದಲ್ಲಿ ಶನಿವಾರ 4 ಮಂದಿ ಉಗ್ರರನ್ನು ಸೇನೆ ಗುಂಡಿಕ್ಕಿ ಹೊಡೆದುರುಳಿಸಿತ್ತು. ಇದರ ಬೆನ್ನಲ್ಲೇ ಇಂದು ಎಲ್‍ಒಸಿಯ ಕೆರಾನ್ ಸೆಕ್ಟರ್ ನಲ್ಲಿ ಮತ್ತೆ 5 ಮಂದಿ ಉಗ್ರರನ್ನು ಭಾರತೀಯ ಯೋಧರು ಸೆದೆಬಡಿದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
9 terrorists killed by Indian Army in last 24 hrs in Kashmir valley. While 4 terrorists were killed y'day in Batpura in South Kashmir,5 other terrorists eliminated along LoC in Keran sector. Terrorists killed in Keran sector were trying to infiltrate from across LoC: Army sources pic.twitter.com/bmm2aEBMzA
— ANI (@ANI) April 5, 2020
Advertisement
ಶನಿವಾರ ಬೆಳಗ್ಗಿನ ಜಾವ ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾಮ್‍ನಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಸೇನೆ ಸೆದೆಬಡಿದಿತ್ತು.
Advertisement
ಕುಲ್ಗಾಮ್‍ನ ಡಿಹೆಚ್ ಪೊರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ(ಎಸ್‍ಒಜಿ) ಶನಿವಾರ ಬೆಳಗ್ಗಿನ ಜಾವ ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು.
Advertisement
ಕಾರ್ಯಾಚರಣೆ ವೇಳೆ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪೊಲೀಸರು ಹಾಗೂ ಸೇನೆಯ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಆಗ ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಯ್ತು. ಈ ದಾಳಿಯಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು.