ಇಟಾನಗರ: ಭಾರತೀಯ ಸೇನೆಯ (Indian Army) ಚೀತಾ ಹೆಲಿಕಾಪ್ಟರ್ (Cheetah Helicopter) ಅರುಣಾಚಲ ಪ್ರದೇಶದಲ್ಲಿ (Arunachal Pradesh) ಗುರುವಾರ ಪತನಗೊಂಡಿದೆ.
ಮಾಹಿತಿ ಪ್ರಕಾರ, ರಾಜ್ಯದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಇದನ್ನೂ ಓದಿ: 8 ವರ್ಷ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವಕ ಅರೆಸ್ಟ್
- Advertisement
ಚೀತಾ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ (Air Traffic Control)ನೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದಾರೆ.
- Advertisement
ಘಟನೆ ಬಳಿಕ ಇಬ್ಬರು ಪೈಲಟ್‌ಗಳು ನಾಪತ್ತೆಯಾಗಿದ್ದು, ಸೇನೆಯಿಂದ ಶೋಧ ಕಾರ್ಯ ನಡೆದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲಿ – ಸ್ಥಳೀಯ ಕಾಂಗ್ರೆಸ್ ನಾಯಕರ ಮನವಿ