ಮುಂಬೈ: ಭಾರತೀಯ ಕ್ರಿಕೆಟಿಗ (Indian Cricketer) ಕೇದಾರ್ ಜಾಧವ್ (Kedar Jadhav) ಅವರ ತಂದೆ ನಾಪತ್ತೆಯಾಗಿದ್ದಾರೆ ಎಂದು ಜಾಧವ್ ಸೋಮವಾರ ಪುಣೆಯ (Pune) ಅಲಂಕಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 75 ವರ್ಷದ ಮಹದೇವ್ ಸೋಪಾನ್ ಜಾಧವ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಮೂಲಗಳ ಪ್ರಕಾರ, ಕೇದಾರ್ ಜಾಧವ್ ಮತ್ತು ಮಹದೇವ್ ಜಾಧವ್ ಪುಣೆ ನಗರದ ಕೊತ್ರುಡ್ ಪ್ರದೇಶದ ನಿವಾಸಿಗಳು. ಮಹದೇವ್ ಸೋಮವಾರ ಮನೆಯವರಿಗೆ ತಿಳಿಸದೇ ಹೊರಗಡೆ ಹೋಗಿದ್ದಾರೆ. ಬಹಳ ಹೊತ್ತಾದರೂ ಮನೆಗೆ ಹಿಂದಿರುಗಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸಂಜೆವರೆಗೂ ಹುಡುಕಾಡಿದರೂ ಸಿಗದಿದ್ದಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರೋಚಕ ಫೈನಲ್ – ಮುಂಬೈ ಇಂಡಿಯನ್ಸ್ ಚೊಚ್ಚಲ WPL ಚಾಂಪಿಯನ್
ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೋಧ ಆರಂಭಿಸಿದ್ದು, ಇತರ ಪೊಲೀಸ್ ಠಾಣೆಗೂ ಜಾಧವ್ ಅವರ ತಂದೆ ಫೋಟೋವನ್ನು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: WPLನಲ್ಲಿ ನೋಬಾಲ್ ವಿವಾದ – ಚಾಂಪಿಯನ್ ಪಟ್ಟ ಕೈತಪ್ಪಿಸಿದ ಆ ಒಂದು ಔಟ್