ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರರೊಬ್ಬರು ಭೇಟಿ ಮಾಡಿ ಅವರ ಜೊತೆ ಮಾತನಾಡಿದ್ದಾರೆ.
ಕ್ರಿಕೆಟ್ ಆಟಗಾರ ಪೃಥ್ವಿ ಶಾ ನಟ ಯಶ್ ಅವರನ್ನು ಭೇಟಿ ಮಾಡಿದ್ದಾರೆ. ಪೃಥ್ವಿ ಶಾ ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು. ಇತ್ತ ನಟ ಯಶ್ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿದ್ದರು. ಹೀಗಾಗಿ ಇಂದು ನಟ ಯಶ್ ಅವರನ್ನ ಭೇಟಿ ಮಾಡಿದ್ದು, ಕೆಲ ಸಮಯ ಅವರ ಜೊತೆ ಮಾತನಾಡಿ ಪೃಥ್ವಿ ಶಾ ಕಾಲ ಕಳೆದಿದ್ದಾರೆ.
Advertisement
Advertisement
ಕ್ರಿಕೆಟ್ ಆಟಗಾರ ನಟ ಯಶ್ ಅವರನ್ನು ಭೇಟಿ ಮಾಡಿದ್ದ ಫೋಟೋವನ್ನು ಯಶ್ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೋಟೋ ಜೊತೆಗೆ “ಭಾರತದ ಕ್ರಿಕೆಟ್ ತಂಡದ ಆಟಗಾರರು ಮತ್ತು 19 ವರ್ಷದೊಳಗಿನ ವಿಶ್ವಕಪ್ ಪಂದ್ಯವನ್ನು ಭಾರತಕ್ಕೆ ಗೆದ್ದು ಕೊಟ್ಟ ನಾಯಕ “ಪೃಥ್ವಿ ಶಾ” ಅವರು ಇಂದು ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿಯಾಗಿ ಕೆಲಸಮಯ ಕಳೆದರು” ಎಂದು ಬರೆದುಕೊಂಡಿದ್ದಾರೆ.
Advertisement
ಪೃಥ್ವಿ ಶಾ ಯಾರು?
ಟೆಸ್ಟ್ ಕ್ಯಾಪ್ ಧರಿಸಿದ ಮೊದಲ ಪಂದ್ಯದಲ್ಲೇ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲೇ ವೇಗವಾಗಿ ಶತಕ ಸಿಡಿಸಿದ ಭಾರತದ ಎರಡನೇ, ವಿಶ್ವದ ಮೂರನೇ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲ ಎಸೆತವನ್ನು ಎದುರಿಸುವ ಮೂಲಕ ಪಾದರ್ಪಣೆಯ ಪಂದ್ಯದಲ್ಲೇ ಇನ್ನಿಂಗ್ಸ್ ಮೊದಲ ಎಸೆತವನ್ನು ಎದುರಿಸಿದ ಪ್ರಥಮ ಭಾರತೀಯ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ಮೊದಲು ಜಿಂಬಾಬ್ವೆಯ ಹ್ಯಾಮಿಲ್ಟನ್ ಮಸಕಜ, ಬಾಂಗ್ಲಾದೇಶ ತಮಿಮ್ ಇಕ್ಬಾಲ್, ಪಾಕಿಸ್ತಾನ ಇಮ್ರಾನ್ ಫರ್ಹಾತ್ ತಮ್ಮ ಮೊದಲ ಪಂದ್ಯದಲ್ಲೇ ಇನ್ನಿಂಗ್ಸ್ ನ ಮೊದಲ ಎಸೆತವನ್ನು ಎದುರಿಸಿದ್ದರು.
Advertisement
https://twitter.com/YashFC/status/1084014069491761159
ರಾಜ್‍ಕೋಟ್‍ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿದ್ದ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರ ಕೈಯಿಂದ ಟೆಸ್ಟ್ ಕ್ಯಾಪ್ ಧರಿಸಿದ ಪೃಥ್ವಿ ಶಾ ಟೆಸ್ಟ್ ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಿದ 293ನೇ ಆಟಗಾರನೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಸದ್ಯಕ್ಕೆ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಕಂಡಿದ್ದು, ಬಾಕ್ಸ್ ಅಫೀಸ್ ನಲ್ಲಿ 200 ಕೋಟಿ ಗಳಿಸಿ ಮುನ್ನುಗ್ಗುತ್ತಿದೆ. 25 ದಿನಗಳನ್ನ ಪೂರೈಸಿರುವ ಕೆಜಿಎಫ್ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv