ನವದೆಹಲಿ: ಭಾರತದ (India) ಸರಕುಗಳ ಮೇಲಿನ ಆಮದು ಸುಂಕವನ್ನು (Tariffs) 50% ಹೆಚ್ಚಿಸುವುದಾಗಿ ಅಮೆರಿಕದ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಕರಡು ಅಧಿಸೂಚನೆ ಹೊರಡಿಸಿದೆ.
`ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆ ಪರಿಹರಿಸುವುದು’ ಎಂಬ ಶೀರ್ಷಿಕೆಯ ಪತ್ರಕ್ಕೆ ಆ.6 ರಂದು ಟ್ರಂಪ್ ಸಹಿ ಹಾಕಿದ್ದರು. ಈ ಆದೇಶ ಜಾರಿಗೆ ತರಲು ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯು ಭಾರತದ ಆಮದಿನ ಮೇಲೆ ಹೊಸ ಸುಂಕ ದರವನ್ನು ನಿಗದಿಪಡಿಸಲಾಗುತ್ತದೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ
ಆ.27ರ ಮಧ್ಯರಾತ್ರಿಯಿಂದ ಈ ನಿಯಮ ಜಾರಿಗೆ ಬರಲಿದೆ. ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅನುಗುಣವಾಗಿ ಅಮೆರಿಕದ ಹಾರ್ಮೋನೈಸ್ಡ್ ಟ್ಯಾರಿಫ್ ವೇಳಾಪಟ್ಟಿಯನ್ನು ಮಾರ್ಪಡಿಸುವುದು ಅಗತ್ಯವೆಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಜುಲೈ 30 ರಂದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿಯಾಗಿ 25% ರಷ್ಟು ಸುಂಕ ಘೋಷಿಸಿದ್ದರು. ಹೆಚ್ಚುವರಿ ಸುಂಕದಿಂದ ಭಾರತದ ಮೇಲೆ ಹಲವು ಪರಿಣಾಮ ಬೀರಲಿವೆ. 2024ರಲ್ಲಿ ಅಮೆರಿಕವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿದ್ದು, 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಕಳಿಸಿಕೊಟ್ಟಿತ್ತು. ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ 50% ಸುಂಕವು ಆ. 27ರಿಂದ ಜಾರಿಯಾಗಲಿದ್ದು, ಇದು ಭಾರತದ ಆರ್ಥಿಕತೆ (Indian Economy) ಮೇಲೆ ಹೊಡೆತ ಬೀಳಲಿದೆ ಅನ್ನೋದು ತಜ್ಞರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ