ವಾಷಿಂಗ್ಟನ್: ಕೆಂಪು ಸಮುದ್ರದಲ್ಲಿ (Red Sea) ಯೆಮೆನ್‌ನ ಹೌತಿ ಬಂಡುಕೋರರು (Yemen’s Houthi rebels) ಭಾರತದ ಧ್ವಜವುಳ್ಳ ಕಚ್ಚಾ ತೈಲ ಟ್ಯಾಂಕರ್ (Indian-Flagged Oil Tanker) ಮೇಲೆ ಡ್ರೋನ್ ದಾಳಿ (Drone Attack) ನಡೆಸಿದ್ದಾರೆ ಎಂದು ಅಮೆರಿಕ (USA) ತಿಳಿಸಿದೆ.
ಎಂ/ವಿ ಸಾಯಿಬಾಬಾ ಹೆಸರಿನ ಗ್ಯಾಬನ್ ಒಡೆತನದ ಹಡಗಿನ (Ship) ಮೇಲೆ ದಾಳಿ ನಡೆಸಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದೆ. ಭಾರತೀಯ ಕಾಲಮಾನ ರಾತ್ರಿ 10:30ರ ವೇಳೆಗೆ ಈ ದಾಳಿ ಸಂಭವಿಸಿದೆ. ಭಾರತೀಯ ಹಡಗಿನ ಮೇಲೆ ದಾಳಿ ನಡೆದ ಬಳಿಕ ಮತ್ತೊಂದು ಹಡಗಿನ ಮೇಲೆ ಈ ದಾಳಿ ನಡೆದಿದೆ.
Advertisement
On December 23 two Houthi anti-ship ballistic missiles were fired into international shipping lanes in the Southern Red Sea from Houthi controlled areas of Yemen. No ships reported being impacted by the ballistic missiles.
Between 3 and 8 p.m. (Sanaa time), the USS LABOON (DDG… pic.twitter.com/jcBisbXBaS
— U.S. Central Command (@CENTCOM) December 24, 2023
Advertisement
ಶನಿವಾರ ಎರಡು ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿದೆ. ನಾರ್ವೇ ಧ್ವಜದ ಹೊಂದಿದ್ದ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿತ್ತು. ಆದರೆ ಈ ಹಡಗು ಸ್ವಲ್ಪದರಲ್ಲೇ ಪಾರಾಗಿದೆ ಎಂದು ಅಮೆರಿಕ ತಿಳಿಸಿದೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ವ್ಯಾಪಾರಿ ಹಡಗಿನ ಮೇಲೆ ಡ್ರೋನ್ ದಾಳಿ
Advertisement
ಹೌತಿ ಬಂಡುಕೋರರಿಗೆ ಇರಾನ್ ಬೆಂಬಲ ನೀಡುತ್ತಿದೆ. ಹಮಾಸ್ ವಿರುದ್ಧ ಇಸ್ರೇಲ್ ಯುದ್ಧ ಸಾರಿದ್ದನ್ನು ಖಂಡಿಸಿ ಹೌತಿ ಬಂಡುಕೋರರು ಈಗ ಕೆಂಪು ಸಮುದ್ರದ ಮೂಲಕ ಹೋಗುವ ವ್ಯಾಪಾರಿ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿದ್ದಾರೆ.
Advertisement
ಕೆಂಪು ಸಮುದ್ರದಲ್ಲಿ ಪದೇ ಪದೇ ದಾಳಿಯಾಗುತ್ತಿರುವ ಕಾರಣ ಪ್ರಮುಖ ಹಡಗು ಕಂಪನಿಗಳು ಮಾರ್ಗವನ್ನು ಬದಲಾಯಿಸಿದ್ದು ದಕ್ಷಿಣ ಆಫ್ರಿಕಾ ಮೂಲಕವಾಗಿ ಈಗ ಹಡಗುಗಳು ಸಂಚರಿಸುತ್ತಿವೆ.