ನವದೆಹಲಿ: ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ರಷ್ಯಾದ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.
ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ವಿದ್ಯಾರ್ಥಿಗಳ ಒತ್ತೆಯಾಳಾಗಿರುವ ಕುರಿತು ಇದುವರೆಗೆ ಯಾವುದೇ ವರದಿಗಳೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಖಾರ್ಕೀವ್‍ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ದೇಶದ ಪಶ್ಚಿಮ ಭಾಗದ ಕಡೆಯಿಂದ ವಿದ್ಯಾರ್ಥಿಗಳನ್ನು ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ
Advertisement
Our response to media queries regarding reports of Indian students being held hostage in Ukraine ⬇️https://t.co/RaOFcV849D pic.twitter.com/fOlz5XsQsc
— Arindam Bagchi (@MEAIndia) March 3, 2022
Advertisement
ಉಕ್ರೇನ್‍ನಲ್ಲಿನ ನಮ್ಮ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಪ್ರಜೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್ ಅಧಿಕಾರಿಗಳ ಸಹಕಾರದೊಂದಿಗೆ ಅನೇಕ ವಿದ್ಯಾರ್ಥಿಗಳು ನಿನ್ನೆ ಖಾರ್ಕೀವ್ ತೊರೆದಿದ್ದಾರೆ. ರಷ್ಯಾ, ರೊಮೇನಿಯಾ, ಪೋಲ್ಯಾಂಡ್, ಹಂಗೆರಿ, ಸ್ಲೊವೇಕಿಯಾ ಮತ್ತು ಮಾಲ್ಡೋವಾ ಸೇರಿದಂತೆ ಈ ಪ್ರದೇಶದ ದೇಶಗಳ ಜೊತೆಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುತ್ತಿದ್ದೇವೆ. ಇದನ್ನೂ ಓದಿ: ನಾನು ಮತ್ತೆ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್
Advertisement
Advertisement
ಈ ಹಿಂದೆ ರಷ್ಯಾ ರಕ್ಷಣಾ ಸಚಿವಾಲಯವು ಉಕ್ರೇನ್ ವಿರುದ್ಧ ಗಂಭೀರ ಆರೋಪ ಮಾಡಿತ್ತು. ಖಾರ್ಕೀವ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇಡಲಾಗಿದೆ. ಖಾರ್ಕಿವ್ ನಲ್ಲಿ ದಾಳಿಯಾಗುತ್ತಿದ್ದ ಸಂದರ್ಭದಲ್ಲಿ ಭಾರತೀಯರನ್ನು ಅಲ್ಲಿಂದ ಸ್ಥಳಾಂತರ ಮಾಡಲು ಮುಂದಾದ ರಷ್ಯಾವನ್ನು ಉಕ್ರೇನ್ ತಡೆಹಿಡಿದಿತ್ತು. ಅಲ್ಲದೆ ಭಾರತೀಯರನ್ನು ವಾಪಸ್ ಕರೆದುಕೊಂಡು ಹೋಗಿ ಒತ್ತೆಯಾಳಾಗಿರಿಸಿಕೊಂಡಿತು ಎಂದು ಆರೋಪಿಸಿತ್ತು. ಈ ಆರೋಪಕ್ಕೆ ಉಕ್ರೇನ್ ಪ್ರತ್ಯಾರೋಪ ಮಾಡಿದ್ದು, ರಷ್ಯಾ ಸೇನೆ ಭಾರತ, ಪಾಕಿಸ್ತಾನ, ಚೀನಾ ಮತ್ತು ಇನ್ನಿತರ ದೇಶಗಳ ವಿದ್ಯಾರ್ಥಿಗಳನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಂಡಿದೆ ಎಂದಿತ್ತು.