ಒಟ್ಟಾವಾ: ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ಕಾಳಿ ಕುರಿತಾಗಿ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸಾಕ್ಷ್ಯಚಿತ್ರ ಬಿಡುಗಡೆ ಮಾಡದಂತೆ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
Advertisement
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಪೋಸ್ಟರ್ ಮೂಲಕ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ನಂತರ ಈ ಬಗ್ಗೆ ಕೆನಡದಲ್ಲಿರುವ ಹಿಂದೂಗಳು ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಬೇಕು. ಸಾಕ್ಷ್ಯಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡಬಾರದೆಂದು ದನಿ ಎತ್ತಿದ್ದರು. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ
Advertisement
Advertisement
ಈ ಬಗ್ಗೆ ಪತ್ರದ ಮೂಲಕ ಸ್ಪಷ್ಟಪಡಿಸಿರುವ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿ, ಕಾಳಿ ಚಿತ್ರದಲ್ಲಿ ಹಿಂದೂಗಳ ದೇವತೆಗೆ ಅವಮಾನ ಮಾಡಲಾಗಿದೆ ಎಂದು ಇಲ್ಲಿರುವ ಹಿಂದೂ ಸಮುದಾಯದವರಿಂದ ದೂರು ಬಂದಿದೆ. ಹಾಗಾಗಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡದಿರಲು ಕಾರ್ಯಕ್ರಮದ ಸಂಯೋಜಕರಿಗೆ ರಾಯಭಾರ ಕಚೇರಿ ಸೂಚಿಸಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ಮೇಲೆ ಹಲವು ದೂರು ದಾಖಲು
Advertisement
Please see a Press Released issued by @HCI_Ottawa @MEAIndia @IndianDiplomacy @PIB_India @DDNewslive @IndiainToronto @cgivancouver pic.twitter.com/DGjQynxYJS
— India in Canada (@HCI_Ottawa) July 4, 2022
ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್‍ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಬಳಿಕ ಈ ಪೋಸ್ಟರ್ ಕುರಿತಾಗಿ ಆಕ್ರೋಶ ಕೇಳಿ ಬರುತ್ತಿದೆ.