ದುಬೈ: ಹಾರ್ಮುಜ್ ಜಲಸಂಧಿಯಲ್ಲಿ(Strait of Hormuz) ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್(Iran) ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ(Indian) ಸಾವನ್ನಪ್ಪಿ 6 ಮಂದಿಗೆ ಗಾಯಗೊಂಡಿದ್ದಾರೆ.
ಯುಎಇ(UAE) ರಕ್ಷಣಾ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ ವ್ಯಾಪ್ತಿಯಲ್ಲಿರುವ ಹಾರ್ಮುಜ್ ಜಲಸಂಧಿಯ ದಕ್ಷಿಣದ ಹಡಗು ಮಾರ್ಗದಲ್ಲಿ ಚಲಿಸುತ್ತಿದ್ದ ಯುಎಇ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ.
ದಾಳಿಗೆ ಒಳಗಾದ ಎರಡು ರಾಷ್ಟ್ರೀಯ ಟ್ಯಾಂಕರ್‌ಗಳನ್ನು ‘ಮೊಂಬಾಸಾ’ (Mombasa) ಮತ್ತು ‘ಅಲ್ ಬಹಿಯಾ’ (Al Bahiyah) ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಮೊಂಬಾಸಾ ಟ್ಯಾಂಕರ್‌ನಲ್ಲಿದ್ದ ಒಬ್ಬ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಒಟ್ಟು 8 ಜನ ಗಾಯಗೊಂಡಿದ್ದು, ಅವರಲ್ಲಿ 6 ಮಂದಿ ಭಾರತೀಯರು ಮತ್ತು ಇಬ್ಬರು ಉಕ್ರೇನ್ ಪ್ರಜೆಗಳಾಗಿದ್ದಾರೆ.
The Ministry of Defence announces that the national tankers Mombasa and Al Bahiyah were targeted by two Iranian cruise missiles while transiting the southern shipping lane of the Strait of Hormuz, within Omani territorial waters.
The attack resulted in the death of one Indian… pic.twitter.com/i1HrXY0fKP
— وزارة الدفاع |MOD UAE (@modgovae) July 13, 2026
ಗಾಯಗೊಂಡವರ ಪೈಕಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಕ್ಷಿಪಣಿ ದಾಳಿಯಿಂದಾಗಿ ಎರಡೂ ಟ್ಯಾಂಕರ್‌ಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ವಸ್ತು ಹಾನಿಯಾಗಿದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಇದನ್ನೂ ಓದಿ: ಮೊಜ್ತಬಾ ಖಮೇನಿ 90% ಗಾನ್ – ಸಂಚಲನ ಸೃಷ್ಟಿಸಿದ ಟ್ರಂಪ್ ಹೇಳಿಕೆ
