ನವದೆಹಲಿ: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನಲ್ಲಿದ್ದ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ದೃಢಪಡಿಸಿದೆ.
ಜುಲೈ 18 ರಂದು ಕಪ್ಪು ಸಮುದ್ರದಲ್ಲಿ ಸಾಗುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದೆ. ಈ ಘಟನೆ ರಷ್ಯಾದ ಪ್ರಾದೇಶಿಕ ಜಲ ಪ್ರದೇಶದಲ್ಲಿ ವರದಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಸಚಿವಾಲಯ ಪೋಸ್ಟ್ ಹಂಚಿಕೊಂಡಿದೆ.
ದಾಳಿಯ ಸಮಯದಲ್ಲಿ, ಮೂವರು ಭಾರತೀಯ ಪ್ರಜೆಗಳು ಸೇರಿದಂತೆ 10 ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ತಿಳಿದುಬಂದಿದೆ. ಹಡಗಿನಲ್ಲಿರುವ ಇತರ ಇಬ್ಬರು ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
