– ಮೃತನ ಪತ್ನಿ 7 ತಿಂಗಳ ಗರ್ಭಿಣಿ
ಟೆಲ್ ಅವೀವ್: ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿ ದಾಳಿಗೆ (Missile Attack) ಭಾರತೀಯ ಮೂಲದ ಒಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.
ಮೃತನನ್ನು ಕೇರಳದ (Kerala) ಕೊಲ್ಲಂ ಮೂಲದ ಪ್ಯಾಟ್ ನಿಬಿನ್ ಮ್ಯಾಕ್ಸ್‌ವೆಲ್ (31) ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ಬುಷ್ ಜೋಸೆಫ್ ಜಾರ್ಜ್ ಮತ್ತು ಪಾಲ್ ಮೆಲ್ವಿನ್ ಎಂದು ಗುರುತಿಸಲಾಗಿದ್ದು, ಇವರು ಕೂಡ ಕೇರಳ ಮೂಲದವರು ಎನ್ನಲಾಗಿದೆ.
Advertisement
ಮ್ಯಾಕ್ಸ್‌ವೆಲ್ ಅವರು ಎರಡು ತಿಂಗಳ ಹಿಂದೆಯಷ್ಟೇ ಇಸ್ರೇಲ್‌ಗೆ (Israel) ಆಗಮಿಸಿದ್ದರು. ಆದರೆ ದುರಾದೃಷ್ಟವಶಾತ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಷಿಪಣಿ ದಾಳಿಗೆ ಬಲಿಯಾಗಿದ್ದಾರೆ. ಇದೀಗ ಮ್ಯಾಕ್ಸ್‌ವೆಲ್ ಅವರು ಪತ್ನಿ ಹಾಗೂ 5 ವರ್ಷದ ಮಗಳನ್ನು ಅಗಲಿದ್ದಾರೆ. ಜೊತೆಗೆ ಇವರ ಪತ್ನಿ 7 ತಿಂಗಳ ಗರ್ಭಿಣಿ.
Advertisement
Advertisement
ಗಾಯಾಳುಗಳ ಚೇತರಿಕೆ: ಕ್ಷಿಪಣಿ ದಾಳಿಯಿಂದಾಗಿ ಜಾರ್ಜ್ ಅವರ ಮುಖ ಮತ್ತು ದೇಹದ ಮೇಲೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಪೆಟಾಹ್ ಟಿಕ್ವಾದಲ್ಲಿರುವ ಬೈಲಿನ್ಸನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಇತ್ತ ಸಣ್ಣ ಪುಟ್ಟ ಗಾಯಗೊಂಡಿರುವ ಇನ್ನೋರ್ವ ಯುವಕ ಮೆಲ್ವಿನ್ ಅವರನ್ನು ಉತ್ತರ ಇಸ್ರೇಲಿ ನಗರದ ಸಫೆಡ್‌ನಲ್ಲಿರುವ ಝಿವ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕೇರಳದ ಇಡುಕ್ಕಿ ಜಿಲ್ಲೆಯವರಾಗಿದ್ದಾರೆ ಎಂಬುದಾಗಿ ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಾಜಾ ನೆರವು ಕೇಂದ್ರದಲ್ಲಿ ಜನರ ಮೇಲೆ ಇಸ್ರೇಲ್ ಸೈನಿಕರ ಗುಂಡಿನ ದಾಳಿ – 104 ಮಂದಿ ಸಾವು
Advertisement
ಘಟನೆ ಸಂಬಂಧ ಮೃತನ ತಂದೆ ಪಾಥ್ರೋಸ್ ಮ್ಯಾಕ್ಸ್‌ವೆಲ್ ಪ್ರತಿಕ್ರಿಯಿಸಿ, ಸಂಜೆ 4.30 ರ ಸುಮಾರು ಸೊಸೆಯಿಂದ ಕರೆ ಬಂದಿದ್ದು, ತನ್ನ ಮಗ ಅಪಘಾತಕ್ಕೆ ಒಳಗಾಗಿದ್ದಾನೆ ಎಂದು ತಿಳಿಸಿದ್ದಾಳೆ. ನಂತರ 12.30ರ ಸುಮಾರಿಗೆ ಮಗನ ಸಾವಿನ ಸುದ್ದಿ ತಿಳಿಯಿತು. ನನಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಇಸ್ರೇಲ್‌ನಲ್ಲಿದ್ದರೆ, ಓರ್ವ ಅಬುಧಾಬಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಕಣ್ಣೀರು ಹಾಕಿದರು.
ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಇಸ್ರೇಲ್‌ನ ಉತ್ತರದ ಗೆಲಿಲಿ ಪ್ರದೇಶದಲ್ಲಿ ಮೊಶಾವ್ (ಸಾಮೂಹಿಕ ಕೃಷಿ ಸಮುದಾಯ) ದ ಮಾರ್ಗಲಿಯೊಟ್‌ನ ತೋಟಕ್ಕೆ ಕ್ಷಿಪಣಿ ದಾಳಿಯಾಗಿದೆ ಎಂದು ರಕ್ಷಣಾ ಸೇವೆಗಳ ವಕ್ತಾರ ಮ್ಯಾಗೆನ್ ಡೇವಿಡ್ ಆಡಮ್ (MDA) ಝಕಿ ಹೆಲ್ಲರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ದಾಳಿಯನ್ನು ಲೆಬನಾನ್‌ನ ಶಿಯಾ ಹೆಜ್ಬೊಲ್ಲಾ ಬಣ ನಡೆಸಿದೆ ಎನ್ನಲಾಗಿದೆ. ಇದು ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಹಮಾಸ್‌ಗೆ ಬೆಂಬಲವಾಗಿ ಅಕ್ಟೋಬರ್ 8 ರಿಂದ ಉತ್ತರ ಇಸ್ರೇಲ್‌ನಲ್ಲಿ ಪ್ರತಿದಿನ ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸುತ್ತಿದೆ.