ನವದೆಹಲಿ: ಭಾರತ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಪಾಕಿಸ್ತಾನದ ಮಿಲಿಟರಿ ನೆಲೆಗಳಿಗೆ ಆಗಿರುವ ಹಾನಿಗಳ ಕುರಿತು ಸಾಕ್ಷಿ ಸಮೇತ ಓಪನ್ ಸೋರ್ಸ್ ಇಂಟೆಲಿಜೆನ್ಸ್ (OSINT) ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತವು ಪಾಕಿಸ್ತಾನದ ಪ್ರದೇಶದೊಳಗೆ ಆಯ್ದ ಮಿಲಿಟರಿ ಗುರಿಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತು. ಇವುಗಳಲ್ಲಿ ರಫಿಕಿ, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ರಾಡಾರ್ ಸ್ಥಾಪನೆಗಳು, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು ಮತ್ತು ಮದ್ದುಗುಂಡು ಡಿಪೋಗಳು ಸೇರಿವೆ.
𝗕𝗛𝗢𝗟𝗔𝗥𝗜 𝗚𝗢𝗡𝗘 | Precision striking by Indian ALCM (Likely Brahmos) at PAF Base Bholari on 10th May 2025.
Via : @KawaSpace pic.twitter.com/Ykp9TsLw9X
— Alpha Defense™ (@alpha_defense) May 11, 2025
ಪಾಕಿಸ್ತಾನದ ಭೋಲಾರಿಯಲ್ಲಿರುವ ಪಿಎಎಫ್ ನೆಲೆಯ ಬಿಡಿಎ (ಬಾಂಬ್ ಹಾನಿ ಮೌಲ್ಯಮಾಪನ) ಚಿತ್ರವನ್ನು ಕಾವಾ ಸ್ಪೇಸ್ ಹಂಚಿಕೊಂಡಿದೆ. ಭಾರತೀಯ ಎಎಲ್‌ಸಿಎಂ (ವಾಯು-ಉಡಾವಣಾ ಕ್ರೂಸ್ ಕ್ಷಿಪಣಿ) ನಡೆಸಿದ ನಿಖರ ದಾಳಿಯ ಕುರಿತು ಸಾಕ್ಷಿ ಸಮೇತ ಮಾಹಿತಿ ಹಂಚಿಕೊಳ್ಳಲಾಗಿದೆ. ಪಿಎಎಫ್ (ಪಾಕಿಸ್ತಾನ ವಾಯುಪಡೆ) ಹ್ಯಾಂಗರ್ ಮೇಲೆ ಆಗಿರುವ ಎಫೆಕ್ಟ್ ಬಗ್ಗೆ ಸಾಕ್ಷಿ ಇದೆ.
ಸರ್ಗೋಧಾದಲ್ಲಿರುವ ಪಿಎಎಫ್ ನೆಲೆ ಮುಷಾಫ್‌ನ ಬಿಡಿಎ ವಿಶ್ಲೇಷಣೆ ಎಂಬ ಫೊಟೊವೊಂದನ್ನು ಒಸಿಂಟ್ ಹ್ಯಾಂಡಲ್ ಕಾವಾ ಸ್ಪೇಸ್ ಹಂಚಿಕೊಂಡಿದೆ. ದಾಳಿಯ ನಂತರದ ಚಿತ್ರಣ ವಿಶ್ಲೇಷಣೆಯು ಭಾರತೀಯ ಪಡೆಗಳಿಂದ ನಾಶವಾದ ರನ್‌ವೇಯನ್ನು ತೋರಿಸುತ್ತದೆ ಎಂದು ಕಾವಾ ಸ್ಪೇಸ್ ಹೇಳಿದೆ.
Sargodha Air Base Runway pics from @KawaSpace pic.twitter.com/KmHAhkU10s
— Alpha Defense™ (@alpha_defense) May 10, 2025
ಜಾಕೋಬಾಬಾದ್‌ನಲ್ಲಿರುವ ಪಿಎಎಫ್ ಬೇಸ್ ಶಹಬಾಜ್‌ನ ಕಾವಾ ಸ್ಪೇಸ್ ನಡೆಸಿದ ಬಿಡಿಎ ವಿಶ್ಲೇಷಣೆಯು, ಪಿಎಎಫ್ ಹ್ಯಾಂಗರ್ ಮೇಲೆ ಭಾರತೀಯ ಎಎಲ್‌ಸಿಎಂ ನಡೆಸಿದ ನಿಖರ ದಾಳಿಯ ಪರಿಣಾಮವನ್ನು ತೋರಿಸುತ್ತದೆ.
ಭಾರತೀಯ ವಾಯುಪಡೆಯ ದಾಳಿಯು ನೆಲೆಯ ಮುಖ್ಯ ಏಪ್ರನ್‌ನಲ್ಲಿರುವ ಹ್ಯಾಂಗರ್‌ನ ಮೇಲೆ ಪರಿಣಾಮ ಬೀರಿದೆ. ATC (ವಾಯು ಸಂಚಾರ ನಿಯಂತ್ರಕ) ಕಟ್ಟಡಕ್ಕೆ ಹಾನಿಯಾಗಿರುವ ಶಂಕೆಯೂ ಇದೆ ಎಂದು ಇಂಟೆಲಿಜೆನ್ಸ್ ತಿಳಿಸಿದೆ.