ಶ್ರೀನಗರ: ಕಾಂಗ್ರೆಸ್‌ನ (Congress) ಮಾಜಿ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad) ಅವರು ಮುಸ್ಲಿಮರ (Muslims) ಮೂಲದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಹಿಂದೂ (Hindu) ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದು ಹೇಳಿದ್ದಾರೆ.
ಆಗಸ್ಟ್ 14ರಂದು ದೋಡಾ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾಶ್ಮೀರದ ಉದಾಹರಣೆ ಇದೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರು ಇರಲಿಲ್ಲ. ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಲ್ಲಿ ಇಸ್ಲಾಂ ಧರ್ಮ 1,500 ವರ್ಷಗಳ ಹಿಂದೆ ಬಂದಿತ್ತು. ಆದರೆ ಹಿಂದೂ ಧರ್ಮ ಬಹಳ ಹಳೆಯದು ಎಂದರು. ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
ಇಸ್ಲಾಂ ಧರ್ಮ ಹೊರಗಿನಿಂದ ಬಂದಿರಬೇಕು, 10-20 ಜನರು ಮೊಘಲ್ ಸೈನ್ಯದಿಂದ ಬಂದಿರಬೇಕು. ಉಳಿದವರು ಹಿಂದೂ ಮತ್ತು ಸಿಖ್ ಧರ್ಮದಿಂದ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ಆಜಾದ್ ಅವರು, ನಾವು ಹಿಂದೂಗಳು. ಮುಸ್ಲಿಮರು, ದಲಿತರು, ಕಾಶ್ಮೀರಿಗಳಿಗಾಗಿ ರಾಜ್ಯವನ್ನು ನಿರ್ಮಿಸಿದ್ದೇವೆ. ಇದು ನಮ್ಮ ಭೂಮಿ. ಇಲ್ಲಿ ಯಾರೂ ಹೊರಗಿನಿಂದ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ನಾಲ್ವರಿಗೆ ಶೂಟೌಟ್ ಮಾಡಿದ್ದ ಅಧಿಕಾರಿ ಸೇವೆಯಿಂದ ವಜಾ
600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸಲ್ಮಾನರಾಗಿದ್ದವರು ಯಾರು? ಎಲ್ಲಾ ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಹಾಗಾಗಿ ಎಲ್ಲರೂ ಹಿಂದೂ ಧರ್ಮದಲ್ಲಿ ಹುಟ್ಟಿದ್ದಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೇನೆಗೆ ಪ್ರಬಲ ಶಸ್ತ್ರಾಸ್ತ್ರಗಳ ಬಲ ನೀಡಿದ್ದ DRDO ಮಾಜಿ ಮುಖ್ಯಸ್ಥ ನಿಧನ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]