ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ನಡೆದಿದ್ದ ಭಾರತದ (India) ಮೂಲದ ಯುವತಿಯೊಬ್ಬಳನ್ನು ಆಕೆಯ ಮಾಜಿ ಪ್ರಿಯಕರ ಜೀವಂತವಾಗಿ ಸಮಾಧಿ ಮಾಡಿದ ಪ್ರಕರಣದಲ್ಲಿ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ (Nursing Student) ಜಸ್ಮೀನ್ ಕೌರ್ ಎಂಬ ಯುವತಿಯನ್ನು ಆರೋಪಿ ತಾರಿಕ್‍ಜೋತ್ ಸಿಂಗ್ 2021ರ ಮಾರ್ಚ್‍ನಲ್ಲಿ ಅಪಹರಿಸಿದ್ದ. ಬಳಿಕ ಕೇಬಲ್ ಹಾಗೂ ಗಮ್ ಟೇಪ್ ಬಳಸಿ ಕೈ ಕಾಲುಗಳಿಗೆ ಸುತ್ತಿ ಆಕೆಯನ್ನು ಜೀವಂತವಾಗಿ ಸಮಾಧಿ ಮಾಡಿದ್ದ. ಆತ ಈ ಕೃತ್ಯವನ್ನು ಆಕೆಯ ಮೇಲಿನ ದ್ವೇಷದಿಂದ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ
Advertisement
Advertisement
ಈ ವರ್ಷದ ಫೆಬ್ರುವರಿಯಲ್ಲಿ ಆತನ ವಿಚಾರಣೆ ನಡೆಸಿದ್ದಾಗ ಆರೋಪಿ ಆಕೆಯ ಹತ್ಯೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದ. ಬಳಿಕ ಯುವತಿಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.
Advertisement
Advertisement
ಈ ಬಗ್ಗೆ ಮಾತನಾಡಿರುವ ಯುವತಿಯ ತಾಯಿ, ಆರೋಪಿ ತನ್ನ ಮಗಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಆತನನ್ನು ನಿರಾಕರಿಸಿದ್ದಳು. ಇದರಿಂದಾಗಿ ಆತ ಕೃತ್ಯ ಎಸಗಿದ್ದಾನೆ. ಆತ ಕ್ಷಮೆಗೆ ಯೋಗ್ಯನಲ್ಲ, ನನ್ನ ಮಗಳ ಸಂಕಟ ನೆನೆದು ದುಃಖಿಸುತ್ತಿದ್ದೇನೆ ಎಂದಿದ್ದಾರೆ.
ಈ ಬಗ್ಗೆ ನ್ಯಾಯಾಲಯದಲ್ಲಿ ವಾದಿಸಿರುವ ಕೌರ್ ಪರ ವಕೀಲ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್
Web Stories