ವಾಷಿಂಗ್ಟನ್: ಭಾರತೀಯ ಮೂಲದ ನಂದ್ ಮುಲ್ಚಂದಾನಿ ಅವರನ್ನು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ(ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ)ಯ ಮೊದಲ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ನೇಮಿಸಲಾಗಿದೆ.
ಮುಲ್ಚಂದಾನಿ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಪ್ರಕಟಿಸಿದ್ದು, ಅದನ್ನು ಏಜೆನ್ಸಿಯ ನಿರ್ದೇಶಕ ವಿಲಿಯಂ ಜೆ ಬರ್ನ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ʼಚರಕ ಶಪಥʼ ಪ್ರಮಾಣ ವಚನ ನೀಡಿದ್ದಕ್ಕೆ ಕಾಲೇಜು ಡೀನ್ ವಜಾ
Advertisement
Advertisement
ಮುಲ್ಚಂದಾನಿ ಸಿಲಿಕಾನ್ ವ್ಯಾಲಿ ಹಾಗೂ ರಕ್ಷಣಾ ಇಲಾಖೆಯಲ್ಲಿ 25 ವರ್ಷಕ್ಕೂ ಹೆಚ್ಚು ಅನುಭವವನ್ನು ಹೊಂದಿದ್ದಾರೆ. ಬರ್ನ್ಸ್ ಮುಲ್ಚಂದಾನಿ ಅವರನ್ನು ತಂತ್ರಜ್ಞಾನದೆಡೆ ಗಮನ ಹರಿಸುವಂತೆ ಕೇಳಿದ್ದು, ಇದೀಗ ಅವರು ತಂಡದ ಭಾಗವಾಗಿರುವುದು ನಮಗೆ ಸಂತಸ ತಂದಿದೆ ಎಂದು ಸಿಐಎ ಹೇಳಿಕೆಯಲ್ಲಿ ತಿಳಿಸಿದೆ.
Advertisement
#CIA Director William J. Burns appoints Nand Mulchandani as CIA’s first Chief Technology Officer (CTO).
With more than 25 years of experience, Mr. Mulchandani will ensure the Agency is leveraging cutting-edge innovations to further CIA’s mission.
— CIA (@CIA) April 29, 2022
Advertisement
ನಂದ್ ಮುಲ್ಚಂದಾನಿ ಯಾರು?
ಮುಲ್ಚಂದಾನಿ ಸ್ಟ್ಯಾನ್‌ಫೋರ್ಡ್ನಲ್ಲಿ ಮ್ಯಾನೇಜ್ಮೆಂಟ್‌ನಲ್ಲಿ ಮಾಸ್ಟರ್ ಆಫ್ ಸೈನ್ಸ್ ಪದವಿ ಪಡೆದಿದ್ದಾರೆ. ಬಳಿಕ ಕಂಪ್ಯೂಟರ್ ಸೈನ್ಸ್ ಹಾಗೂ ಗಣಿತಶಾಸ್ತ್ರದಲ್ಲಿ ಪದವಿಯನ್ನು ಪಡೆದಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದನ್ನೂ ಓದಿ: ಮೋದಿ ಮುಟ್ಟಿದ್ರೆ, ಗುಜರಾತ್ ಹೋಗುತ್ತೆ – ಅಡ್ವಾಣಿಗೆ ಅಂದು ಠಾಕ್ರೆ ನೀಡಿದ್ದ ಸಲಹೆಯ ಬಗ್ಗೆ ಉದ್ಧವ್ ಮಾತು
ಮುಲ್ಚಂದಾನಿ ತಮ್ಮ ಶಾಲಾ ಶಿಕ್ಷಣವನ್ನು ದೆಹಲಿಯ ಬ್ಲೂಬೆಲ್ಸ್ ಸ್ಕೂಲ್ ಇಂಟರ್‌ನ್ಯಾಶನಲ್‌ನಲ್ಲಿ ಪೂರೈಸಿದರು. ಸಿಐಎಗಾಗಿ ಕೆಲಸ ಮಾಡುವುದಕ್ಕೂ ಮೊದಲು ಕೃತಕ ಬುದ್ಧಿಮತ್ತೆ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.