ನ್ಯೂಯಾರ್ಕ್: ಭಾರತ ಮೂಲದ ಪ್ರಾಧ್ಯಾಪಕಿ ನೀಲಿ ಬೆಂಡಪುಡಿ ಅವರು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದ ಪ್ರೆಸ್ಟೀಜಿಯಸ್ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿಯ (ಪೆನ್ ಸ್ಟೇಟ್) ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆಯಾಗಿದ್ದಾರೆ.
Advertisement
ವಿಶ್ವವಿದ್ಯಾಲಯದ ಅಧ್ಯಕ್ಷರನ್ನಾಗಿ ನೀಲಿ ಬೆಂಡಪುಡಿ ಅವರನ್ನು ಆಯ್ಕೆ ಮಾಡಿರುವುದಾಗಿ ಶೈಕ್ಷಣಿಕ ಸಂಸ್ಥೆ ಶುಕ್ರವಾರ ಘೋಷಿಸಿದೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ
Advertisement
Penn State names Dr. Neeli Bendapudi as its 19th president!
Welcome, President-elect Bendapudi!https://t.co/y82oujroSX pic.twitter.com/EyCn8uxKFI
— Penn State (@penn_state) December 9, 2021
Advertisement
ಬೆಂಡಪುಡಿ ಅವರು, ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಜನಿಸಿದರು. 1986 ಉನ್ನತ ಶಿಕ್ಷಣಕ್ಕಾಗಿ ಅಮೆರಿಕಗೆ ತೆರಳಿದರು. ಸದ್ಯ ಅವರು ಲೂಯಿಸ್‌ವೆಲ್ಲಿ ವಿಶ್ವವಿದ್ಯಾಲಯದಲ್ಲಿ ಮಾರ್ಕೆಟಿಂಗ್ ವಿಷಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Advertisement
ಬೆಂಡಪುಡಿ ಅವರನ್ನು ಅಧ್ಯಕ್ಷೆಯಾಗಿ ನೇಮಿಸಿ ವಿಶ್ವವಿದ್ಯಾಲಯದ ಸ್ಟೇಟ್ ಬೋರ್ಡ್ ಟ್ರಸ್ಟೀಸ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆ ಮೂಲಕ ಬೆಂಡಪುಡಿ ಅವರು ವಿವಿಯ 19 ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಇದನ್ನೂ ಓದಿ: ಅದ್ಧೂರಿಯಾಗಿ ನೆರವೇರಿತು ಕತ್ರಿನಾ ಕೈಫ್-ವಿಕ್ಕಿ ಕೌಶಲ್ ಮದುವೆ
ಪೆನ್ ಸ್ಟೇಟ್ ವಿಶ್ವದ ಅತ್ಯಂತ ಪ್ರತಿಷ್ಠಿತ ವಿವಿಗಳಲ್ಲಿ ಒಂದು. ಅಂತಹ ವಿವಿಯಲ್ಲಿ ಪ್ರಮುಖ ಜವಾಬ್ದಾರಿ ನಿಭಾಯಿಸಲು ಹೆಮ್ಮೆ ಎನಿಸುತ್ತದೆ. ಸಂಸ್ಥೆಯಲ್ಲಿ ಜವಾಬ್ದಾರಿಯುತ ಸ್ಥಾನ ನೀಡಿದ ಟ್ರಸ್ಟ್‌ಗೆ ನಾನು ಋಣಿ. ಸಂಸ್ಥೆಯ ಉನ್ನತಿಗೆ ನಾನು ಶ್ರಮಿಸುತ್ತೇನೆ ಎಂದು ಬೆಂಡಪುಡಿ ಪ್ರತಿಕ್ರಿಯಿಸಿದ್ದಾರೆ.