ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 16 ನೇ ಆವೃತ್ತಿ ಮಾ.31 ರಂದು ಪ್ರಾರಂಭವಾಗಲಿದೆ. ಶುಕ್ರವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದ್ದು, ಟೂರ್ನಿಯ ಆರಂಭಕ್ಕೂ ಮುನ್ನ, ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿಯಲಿರುವ 5 ಆಟಗಾರ ಪಟ್ಟಿ ಇಲ್ಲಿದೆ.
Advertisement
ಜಸ್ಪ್ರೀತ್ ಬುಮ್ರಾ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಬುಮ್ರಾ ಬೆನ್ನಿನ ಸಮಸ್ಯೆಯಿಂದ ಬಳಲುತ್ತಿದ್ದು ಮುಂಬರುವ ಐಪಿಎಲ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Advertisement
ರಿಷಬ್ ಪಂತ್: ಕಾರು ಅಪಘಾತದಿಂದ ಪಂತ್, ತೀವ್ರಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಪಂತ್ (Rishabh Pant) ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.
Advertisement
ಜಾನಿ ಬೈರ್‍ಸ್ಟೋವ್: ಐಪಿಎಲ್ ಅತ್ಯಂತ ಪ್ರಭಾವಶಾಲಿ ಬ್ಯಾಟರ್‌ಗಳಲ್ಲಿ ಒಬ್ಬರಾದ ಬೈರ್‍ಸ್ಟೋವ್ (Jonny Bairstow), ಕಾಲು ಮುರಿತದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಪಂಜಾಬ್ ಕಿಂಗ್ಸ್ ಅವರ ಬದಲಿಗೆ ಮ್ಯಾಟ್ ಶಾರ್ಟ್ ಅವರನ್ನು ಆಯ್ಕೆಮಾಡಿಕೊಂಡಿದೆ.
Advertisement
ಕೈಲ್ ಜೆಮಿಸನ್: ಬೆನ್ನಿನ ಗಾಯದಿಂದ ಶಸ್ತ್ರಚಿಕಿತ್ಸೆಗೊಳಗಾದ ಜೆಮಿಸನ್ (Kyle Jamieson) ನಾಲ್ಕು ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದಾರೆ. ಸಿಎಸ್‍ಕೆ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ವೇಗಿ ಸಿಸಂಡಾ ಮಗಾಲಾ ಅವರನ್ನು ಆಯ್ಕೆ ಮಾಡಿಕೊಂಡಿದೆ.
ಶ್ರೇಯಸ್ ಅಯ್ಯರ್: ಬೆನ್ನುನೋವಿನಿಂದಾಗಿ ಶ್ರೇಯಸ್ ಅಯ್ಯರ್ (Shreyas Iyer) ಹೊರಗುಳಿದಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್‍ನ ಇವರ ಸ್ಥಾನವನ್ನು ಸ್ಟಾರ್ ಬ್ಯಾಟರ್ ನಿತೀಶ್ ರಾಣಾ ಅವರನ್ನು ತುಂಬಲಿದ್ದಾರೆ. ಇದನ್ನೂ ಓದಿ: ಪ್ರಾಕ್ಟೀಸ್ ಟೈಮ್‌ನಲ್ಲಿ ಧೋನಿ ಸಿಕ್ಸರ್ ಸುರಿಮಳೆ – ಹುಚ್ಚೆದ್ದು ಕುಣಿದ ಫ್ಯಾನ್ಸ್