ಅಹಮದಾಬಾದ್: ಕಳಪೆ ಬ್ಯಾಟಿಂಗ್ ಮಾಡಿದರೂ, ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದೆ.
9 ಪಂದ್ಯಗಳ ಪೈಕಿ 6ರಲ್ಲಿ ಜಯ ಸಾಧಿಸಿರುವ ಟೈಟಾನ್ಸ್ ಪಡೆ ಈಗಾಗಲೇ ಪ್ಲೇ ಆಫ್ ತಲುಪುವ ಹಂತದಲ್ಲಿದೆ. ಆದರೆ 9ರಲ್ಲಿ ಕೇವಲ 3 ಪಂದ್ಯಗಳಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉಳಿದೆಲ್ಲ ಪಂದ್ಯಗಳೂ ನಿರ್ಣಾಯಕವಾಗಿವೆ. ಒಂದು ವೇಳೆ ಇಂದಿನ ಪಂದ್ಯ ಸೋತಿದ್ದರೆ, ಬಹುತೇಕ ಪ್ಲೇ ಆಫ್‌ನಿಂದ ಹೊರಬೀಳುವುದು ಖಚಿತವಾಗುತ್ತಿತ್ತು. ಆದರೆ ಗೆಲುವಿನ ಮೂಲಕ ಪ್ಲೇ ಆಫ್ ಕನಸನ್ನ ಜೀವಂತವಾಗಿಸಿಕೊಂಡಿದೆ.
Advertisement
Advertisement
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 130 ರನ್ ಗಳಿಸಿತು. ಗೆಲುವಿಗೆ 131 ರನ್ ಗುರಿ ಪಡೆದ ಗುಜರಾತ್ ಟೈಟಾನ್ಸ್ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿ ಸೋಲೊಪ್ಪಿಕೊಂಡಿತು.
Advertisement
ಕೊನೆಯ ಎರಡು ಓವರ್‌ಗಳಲ್ಲಿ ಗುಜರಾತ್ ಟೈಟಾನ್ಸ್ ಗೆಲುವಿಗೆ 33 ರನ್‌ಗಳ ಅಗತ್ಯವಿತ್ತು. ಈ ವೇಳೆ ಮೊದಲ ಮೂರು ಎಸೆತಗಳಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಕೇವಲ 3 ರನ್ ಗಳಿಸಿದರು. ಇನ್ನೂ 9 ಎಸೆತಗಳಲ್ಲಿ 30 ರನ್‌ಗಳ ಅಗತ್ಯವಿತ್ತು. ತಂಡಕ್ಕೆ ಗಲುವು ಕಠಿಣ ವೆನಿಸಿತ್ತು. ಬಳಿಕ ಕ್ರೀಸ್ ಉಳಿಸಿಕೊಂಡ ರಾಹುಲ್ ತೆವಾಟಿಯಾ ಭರ್ಜರಿ ಹ್ಯಾಟ್ರಿಕ್ ಸಿಕ್ಸ್ ಚಚ್ಚಿದರು. ಇದರಿಂದ ತಂಡಕ್ಕೆ ಗೆಲುವು ಸುಲಭವೆನಿಸಿತ್ತು. ಆದ್ರೆ 6 ಎಸೆತಗಳಲ್ಲಿ 12 ರನ್ ಅಗತ್ಯವಿದ್ದಾಗ ಮೊದಲ ಎರಡು ಎಸೆತಗಳಲ್ಲಿ ಪಾಂಡ್ಯ ಮತ್ತೆ ಕೇವಲ 3ರನ್ ಗಳಿಸಿದರು. ಬಳಿಕ ಕ್ರಿಸ್‌ಗೆ ಬಂದ ತೆವಾಟಿಯಾ 4ನೇ ಎಸೆತ ಎದುರಿಸುವಲ್ಲಿ ವಿಫಲರಾಗಿ, ಮರು ಎಸೆತದಲ್ಲೇ ಕ್ಯಾಚ್ ನೀಡಿ ಪೆವಿಲಿಯನ್‌ಗೆ ಮರಳಿದರು.
Advertisement
ನಂತರ ಕ್ರೀಸ್‌ಗೆ ಬಂದ ರಶೀದ್ ಕಾನ್ 5ನೇ ಎಸೆತದಲ್ಲಿ 2 ರನ್ ಕದ್ದರು. ಕೊನೆಯ ಎಸೆತಕ್ಕೆ 7 ರನ್‌ಗಳ ಅಗತ್ಯವಿತ್ತು. ಫುಲ್‌ಟಾಸ್ ಬಂದರೂ ರಶೀದ್ ಸಿಕ್ಸ್‌ಗೆ ಅಟ್ಟುವಲ್ಲಿ ವಿಫಲರಾದರು. ಈ ಹಿನ್ನೆಲೆಯಲ್ಲಿ ಟೈಟಾನ್ಸ್ ಸೋಲನ್ನು ಎದುರಿಸಿತು. ಚೇಸಿಂಗ್ ಆರಂಭಿಸಿದ ಬಲಿಷ್ಠ ಟೈಟಾನ್ಸ್ ಪಡೆಯ ಅಗ್ರಕ್ರಮಾಂಕದ ಬ್ಯಾಟರ್‌ಗಳು ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಬೌಲರ್‌ಗಳ ದಾಳಿಗೆ ತತ್ತರಿಸಿತು. ಮೊದಲ 10 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 54 ರನ್‌ಗಳನ್ನಷ್ಟೇ ಗಳಿಸಿತ್ತು. ನಂತರ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಸಹಾಯದಿಂದ 130 ರನ್‌ಗಳ ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಅಮನ್ ಹಕೀಮ್ ಖಾನ್ 44 ಎಸೆತಗಳಲ್ಲಿ 51 ರನ್ (3 ಸಿಕ್ಸರ್, 3 ಬೌಂಡರಿ) ಗಳಿಸಿದರೆ, ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 1 ಸಿಕ್ಸರ್, 2 ಬೌಂಡರಿಯೊಂದಿಗೆ 27 ರನ್ ಗಳಿಸಿದರು. ಇನ್ನೂ ರಿಪಾಲ್ ಪಟೇಲ್ 13 ಎಸೆತಗಳಲ್ಲಿ 23 ರನ್ ಗಳಿಸಿದರು.
ಗುಜರಾತ್ ಟೈಟಾನ್ಸ್ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಹಾರ್ದಿಕ್ ಪಾಂಡ್ಯ 53 ಎಸೆತಗಳಲ್ಲಿ 7 ಬೌಂಡರಿಯೊಂದಿಗೆ 59 ರನ್ ಗಳಿಸಿದರೆ, ಅಭಿನವ್ ಮನೋಹರ್ 26 ರನ್, ರಾಹುಲ್ ತೆವಾಟಿಯಾ 7 ಎಸೆತಗಳಲ್ಲಿ ಸ್ಫೋಟಕ 20 ರನ್ ಗಳಿಸಿದರು.
ಟೈಟಾನ್ಸ್ ಪರ ಮೊಹಮ್ಮದ್ ಶಮಿ 4 ವಿಕೆಟ್ ಪಡೆದರೆ, ಮೋಹಿತ್ ಶರ್ಮಾ 2 ವಿಕೆಟ್ ಹಾಗೂ ರಶೀದ್ ಖಾನ್ 1 ವಿಕೆಟ್ ಕಿತ್ತರು. ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್ ಹಾಗೂ ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ಅನ್ರಿಚ್ ನಾರ್ಟ್ಜೆ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದು ಗೆಲುವಿಗೆ ಕಾರಣರಾದರು.